– ಬಾಬುರಾವ್ ಚಿಂಚನಸೂರ್‍ಗೆ ಕಮಲ ಗಾಳ
– ಶುರುವಾಯ್ತಾ ಆಪರೇಷನ್ ಕಮಲ..?
ಬೆಂಗಳೂರು: ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗೆ ಬಿಗ್ ಶಾಕ್ ನ್ನು ಬಿಜೆಪಿ ನೀಡಿದೆ. ಹೈದ್ರಾಬಾದ್ ಕರ್ನಾಟಕದ ಪ್ರಭಾವಿ ಮುಖಂಡ ಬಾಬುರಾವ್ ಚಿಂಚನಸೂರ ಇಂದು ನಗರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಇಂದು ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗುರುಮಠಕಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಬಾರಿ ತಮ್ಮ ಸೋಲಿಗೆ ಸ್ವಪಕ್ಷೀಯರೇ ಕಾರಣ ಎಂದು ಬಾಬುರಾವ್ ಚಿಂಚನಸೂರ್ ಆರೋಸಿದ್ದ, ಈ ಹಿನ್ನೆಲೆಯಲ್ಲಿ ತಾವು ಪಕ್ಷ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ನಾಯಕರು ಹಲವು ಬಾರಿ ಹೇಳಿಕೊಂಡಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ `ಆಪರೇಷನ್ ಕಮಲ’ ಆರಂಭಿಸಿದೆಯಾ ಎಂಬ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಹುಟ್ಟಿಕೊಂಡಿದೆ.
ಇತ್ತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ನಮ್ಮವರ್ಯಾರು ಬಿಜೆಪಿಗೆ ಹೋಗಲ್ಲ, ಬಿಜೆಪಿ ಶಾಸಕರೇ ನಮ್ಮ ಪಕ್ಷಕ್ಕೆ ಬರಲು ತುದಿಗಾಲ ಮೇಲೆ ನಿಂತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 5 ವರ್ಷ ಸ್ಥಿರ ಆಡಳಿತ ನಡೆಸುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಲಿದ್ದು ಆ ದೃಷ್ಟಿಯಲ್ಲಿ ಸಿದ್ದರಾಮಯ್ಯನವರು ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ ಅಂತಾ ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv