Connect with us

Chikkamagaluru

ಕಾಫಿನಾಡಲ್ಲಿ ಕಾಂಗ್ರೆಸ್ ಮುಖಂಡನಿಗೂ ಕೊರೊನಾ

Published

on

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಂಗ್ರೆಸ್ ಮುಖಂಡನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಕಾಂಗ್ರೆಸ್ ವಲಯದಲ್ಲೂ ಆತಂಕ ಹೆಚ್ಚಾಗಿದೆ.

ಕಲ್ಯಾಣ ನಗರದಲ್ಲಿ ವಾಸವಿರುವ 37 ವರ್ಷದ ಕಾಂಗ್ರೆಸ್ ಮುಖಂಡನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇವರು ಬೆಂಗಳೂರಿಗೆ ಹೋಗಿ ಬಂದಿದ್ದರು ಎಂದು ಹೇಳಲಾಗುತ್ತಿದೆ. ಜಿಲ್ಲಾಡಳಿತ ಈಗಾಗಲೇ ಕಾಂಗ್ರೆಸ್ ಮುಖಂಡನನ್ನ ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಿದೆ.

ಕಾಂಗ್ರೆಸ್ ಮುಖಂಡ ಬೆಂಗಳೂರಿಗೆ ಪ್ರಯಾಣ ಮಾಡಿದ್ದರು ಎಂದು ತಿಳಿದುಬಂದಿದ್ದು, ಜಿಲ್ಲಾಡಳಿತ ಇವರ ಟ್ರಾವೆಲ್ ಹಿಸ್ಟರಿ ತ್ತೆ ಹಚ್ಚಲು ಮುಂದಾಗಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬಸ್ಥರನ್ನ ಕ್ವಾರಂಟೈನ್‍ಗೆ ಸೂಚಿಸಲಾಗಿದ್ದು, ಕುಟುಂಬಸ್ಥರನ್ನ ಹೊರತುಪಡಿಸಿ ಇವರ ಜೊತೆ ಸಂಪರ್ಕದಲ್ಲಿದ್ದ ಸುಮಾರು 10ಕ್ಕೂ ಹೆಚ್ವು ಜನರು ಕೂಡ ಸ್ವಯಂ ಪ್ರೇರಿತವಾಗಿ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

ಮುಂಜಾಗೃತ ಕ್ರಮವಾಗಿ ಇವರು ವಾಸಿಸುವ ಕಲ್ಯಾಣನಗರದ ಬ್ರಾಹ್ಮಣರ ಹಾಸ್ಟೆಲ್ ಹಿಂಭಾಗದ ಏರಿಯಾವನ್ನ ಸೀಲ್‍ಡೌನ್ ಮಾಡಲಾಗಿದೆ. ಇದರ ಜೊತೆಗೆ ಮುಂಬೈನಿಂದ ಪ್ರಯಾಣ ಬೆಳೆಸಿದ್ದ ಮೂಡಿಗೆರೆ ತಾಲೂಕಿನ 70 ವರ್ಷದ ಮತ್ತೋರ್ವ ವೃದ್ಧರಲ್ಲೂ ಕೊರೊನಾ ಸೋಂಕು ದೃಢವಾಗಿದೆ. ಅವರನ್ನು ಕೂಡ ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.