ನವದೆಹಲಿ: ನಿಮಗೆ ಅಷ್ಟೊಂದು ಧೈರ್ಯವಿದ್ದರೆ, ದಯವಿಟ್ಟು ನನ್ನ ವಿರುದ್ಧ ಕೇಸ್ ಹಾಕಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲೆಸೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಗ್, ನೀವು ಹಾಗೂ ನಿಮ್ಮ ಸಚಿವರು ನನ್ನನ್ನು ಪಾಕಿಸ್ತಾನಕ್ಕೆ ಬೆಂಬಲಿಸುವವ ಹಾಗೂ ದೇಶದ್ರೋಹಿ ಎಂದು ಹೇಳಿದ್ದೀರಿ. ನಾನು ಆ ಟ್ವೀಟನ್ನು ದೆಹಲಿಯಿಂದಲೇ ಮಾಡಿದ್ದೆ. ಹೀಗಾಗಿ ದೆಹಲಿಯಲ್ಲಿರುವ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರಲ್ಲವೇ..? ಹೀಗಾಗಿ ನಿಮಗೆ ಧೈರ್ಯವಿದ್ದರೆ ನನ್ನ ವಿರುದ್ಧ ಕೇಸ್ ದಾಖಲಿಸಿ ಎಂದು ಚಾಲೆಂಜ್ ಹಾಕಿದ್ದಾರೆ.
मेरे जिस ट्वीट पर आप व आपके मंत्री गण मुझे पाकिस्तान समर्थक मानते हैं देशद्रोही मानते हैं वह मैंने दिल्ली से किया था जहॉं की पुलिस केंद्र सरकार के अन्तर्गत आती है। अगर आप में साहस है तो मेरे ऊपर मुकदमा दायर करें।
— digvijaya singh (@digvijaya_28) March 6, 2019
ಸಿಂಗ್ ಮಾಡಿದ್ದ ಟ್ವೀಟ್ ನಲ್ಲೇನಿತ್ತು..?
ದಿಗ್ವಿಜಯ ಸಿಂಗ್ ಅವರು ಮಂಗಳವಾರ ಏರ್ ಸ್ಟ್ರೈಕ್ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಪುಲ್ವಾಮಾ ದಾಳಿ ಒಂದು ಘಟನೆ ಆಕ್ಸಿಡೆಂಟ್ ಮಾತ್ರ ಎಂದು ಶಂಕೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಪುಲ್ವಾಮಾ ದುರ್ಘಟನೆಯ ನಂತರ ಭಾರತೀಯ ವಾಯುಪಡೆ ನಡೆಸಿದ ದಾಳಿಯಿಂದ ಪಾಕಿಸ್ತಾನದಲ್ಲಿರುವ ಉಗ್ರಗಾಮಿ ಶಿಬಿರಗಳು ನಾಶವಾಗಿರುವ ಬಗ್ಗೆ ವಿದೇಶಿ ಮಾಧ್ಯಮಗಳು ಅನುಮಾನ ವ್ಯಕ್ತಪಡಿಸಿವೆ. ಇದು ಸರ್ಕಾರ ನೀಡುತ್ತಿರುವ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಕೂಡ ಅವರು ಹೇಳಿದ್ದರು.
ಈ ಹೇಳಿಕೆಗೆ ವಿಕೆ ಸಿಂಗ್ ತಿರುಗೇಟು ನೀಡಿ ದಿಗ್ವಿಜಯ್ ಸಿಂಗ್ ಸೇರಿದಂತೆ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಕಿಡಿಕಾರಿದ್ದರು. ನಾನು ದಿಗ್ವಿಜಯ್ ಸಿಂಗ್‍ರನ್ನು ಗೌರವದಿಂದ ಪ್ರಶ್ನೆ ಮಾಡುತ್ತಿದ್ದೇನೆ. ರಾಜೀವ್ ಗಾಂಧಿ ಅವರ ಹತ್ಯೆ ಅಪಘಾತವೇ ಅಥವಾ ಉಗ್ರರ ದಾಳಿಯೇ ಎಂದು ಪ್ರಶ್ನಿಸಿದ್ದರು.
किन्तु पुलवामा दुर्घटना के बाद हमारी वायु सेना द्वारा की गयी “Air Strike" के बाद कुछ विदेशी मीडिया में संदेह पैदा किया जा रहा है जिससे हमारी भारत सरकार की विश्वसनीयता पर भी प्रश्न चिन्ह लग रहा है।
— digvijaya singh (@digvijaya_28) March 5, 2019
ಏರ್ ಸ್ಟ್ರೈಕ್ ನಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಪ್ರಶ್ನೆಗೆ ವಾಯುಸೇನೆ ಉತ್ತರ ನೀಡಿರಲಿಲ್ಲ. ಏರ್ ಚೀಫ್ ಮಾರ್ಷಲ್ ಧನೋವಾ ಅವರು ಸತ್ತವರ ಹೆಣವನ್ನು ಲೆಕ್ಕಹಾಕುವುದು ನಮ್ಮ ಕೆಲಸವಲ್ಲ. ನಮಗೆ ಏನು ಗುರಿಯನ್ನು ನೀಡಲಾಗಿತ್ತೋ ಆ ಗುರಿಯನ್ನು ಯಶಸ್ವಿಯಾಗಿ ಹೊಡೆದು ಹಾಕಿದ್ದೇವೆ ಎಂದು ಹೇಳಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv