ಭೋಪಾಲ್: ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‍ಐ)ನಿಂದ ಬಿಜೆಪಿ ಹಾಗೂ ಬಜರಂಗ ದಳ ಹಣ ಪಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.
ಮಧ್ಯಪ್ರದೇಶದ ಭಿಂಡ್‍ನಲ್ಲಿ ಮಾಜಿ ಸಂಸದರು ಶನಿವಾರ ಮಹಾರಾಣಾ ಪ್ರತಾಪ್ ಅವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು. ಈ ವೇಳೆ ಮಾತನಾಡಿದ ಅವರು, ಮುಸ್ಲಿಮರಿಗಿಂತ ಮುಸ್ಲಿಮೇತರರೇ ಹೆಚ್ಚಾಗಿ ಪಾಕಿಸ್ತಾನದ ಐಎಸ್‍ಐಗೆ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
#WATCH MP: Congress leader Digvijaya Singh says, "Bajrang Dal, Bharatiya Janata Party (BJP) are taking money from ISI (Inter-Services Intelligence). Attention should be paid to this. Non-Muslims are spying for Pakistan's ISI more than Muslims. This should be understood." (31.08) pic.twitter.com/NPxltpaRZA
— ANI (@ANI) September 1, 2019
ಬಿಜೆಪಿ ಹಾಗೂ ಹಿಂದೂ ಸಂಘಟನೆಯಾಗಿರುವ ಬಜರಂಗ ದಳಕ್ಕೆ ಪಾಕಿಸ್ತಾನದ ಐಎಸ್‍ಐನಿಂದ ಹಣ ವರ್ಗಾವಣೆಯಾಗುತ್ತಿದೆ. ಇದನ್ನು ಎಲ್ಲರೂ ಗಮನಿಸಬೇಕು, ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷವು ಬಿಜೆಪಿ ಹಾಗೂ ಸಂಘ ಪರಿವಾರ ಸಿದ್ಧಾಂತದ ವಿರುದ್ಧ ಹೋರಾಡುತ್ತಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ಬಿಜೆಪಿ- ಸಂಘ ಪರಿವಾರ ಇರಲಿಲ್ಲ. ಹೀಗಾಗಿ ಅವರಿಂದ ನಾವು ದೇಶ ಪ್ರೇಮವನ್ನು ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ದಿಗ್ವಿಜಯ್ ಸಿಂಗ್ ಅವರ ವಿವಾದಾತ್ಮಕ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಜಿ ಸಂಸದರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ.