ಶಿವಮೊಗ್ಗ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ರಾತ್ರಿ ಸಾಗರದ ಮನೆಯಲ್ಲಿ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಬಳಿಕ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ.
Advertisement
Advertisement
ಈ ಹಿನ್ನೆಲೆ ಕಾಗೋಡು ತಿಮ್ಮಪ್ಪ ಅವರನ್ನು ಐಸಿಯುನಿಂದ ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ತಿಮ್ಮಪ್ಪ ಅವರನ್ನ ಬೆಂಗಳೂರಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Advertisement
ಕಾಗೋಡು ತಿಮ್ಮಪ್ಪ ಅವರಿಗೆ ಆರೋಗ್ಯ ಏರುಪೇರಿನಿಂದ ರಾತ್ರಿ 2 ಗಂಟೆಗೆ ಆಸ್ಪತ್ರೆಗೆ ದಾಖಲಿಸಿದ್ದರು. ನಾವು ಚಿಕಿತ್ಸೆ ಕೊಟ್ಟಿದ್ದೇವೆ. ಅವರ ಆರೋಗ್ಯದಲ್ಲೂ ಚೇತರಿಕೆ ಕಂಡು ಬಂದಿದೆ. ಈಗಾಗಲೇ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇದೆ. ಹೀಗಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಅವರು ಶೇ.90ರಷ್ಟು ಆರೋಗ್ಯವಾಗಿದ್ದು, ಎಲ್ಲ ರೀತಿಯ ಪರೀಕ್ಷೆಯನ್ನು ಮಾಡಿದ್ದೇವೆ. ಸದ್ಯಕ್ಕೆ ವಿಶ್ರಾಂತಿ ಪಡೆಯಬೇಕಾಗಿದೆ ಎಂದು ವೈದ್ಯ ನಾಗೇಂದ್ರ ತಿಳಿಸಿದ್ದಾರೆ.