ಭೋಪಾಲ್: ಕಾಂಗ್ರೆಸ್ (Congress) ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಇಬ್ಬರು ಪತ್ನಿಯರು ಇರುವ ಪುರುಷರಿಗೆ 2 ಲಕ್ಷ ರೂ. ಸಿಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕಾಂತಿಲಾಲ್ ಭುರಿಯಾ (Kantilal Bhuria) ತಿಳಿಸಿದ್ದಾರೆ.
ಮಧ್ಯಪ್ರದೇಶದ ರತ್ಲಂ ಕ್ಷೇತ್ರದ ಅಭ್ಯರ್ಥಿಯಾಗಿರುವ ಭುರಿಯಾ, 2024 ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಲಾದ ‘ಮಹಾಲಕ್ಷ್ಮಿ ಯೋಜನೆ’ ಕುರಿತು ಮಾತನಾಡಿದರು. ಈ ಯೋಜನೆಯಡಿ ಪ್ರತಿ ಬಡ ಕುಟುಂಬದ ಮನೆಯಲ್ಲಿ ಒಬ್ಬ ಮಹಿಳೆಗೆ ವಾರ್ಷಿಕ 1 ಲಕ್ಷ ರೂ. ಸಿಗುತ್ತದೆ. ಇದನ್ನೂ ಓದಿ: ಪಾಕ್ ಸಹ ಅಣುಬಾಂಬ್ ಹೊಂದಿದೆ, ಕೆರಳಿಸಿದ್ರೆ ಭಾರತದ ಮೇಲೆ ಎಸೆಯುತ್ತಾರೆ: ಕಾಂಗ್ರೆಸ್ ಮಾಜಿ ಸಚಿವ ಪ್ರಚೋದನಕಾರಿ ಹೇಳಿಕೆ!
Advertisement
Advertisement
ಮಹಾಲಕ್ಷ್ಮಿ ಯೋಜನೆಯಡಿ, ಕಾಂಗ್ರೆಸ್ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ 1 ಲಕ್ಷ ರೂ. ನೀಡುತ್ತದೆ. ಹಣವನ್ನು ನೇರವಾಗಿ ಕುಟುಂಬದ ಹಿರಿಯ ಮಹಿಳೆಯ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಆಕೆಯ ಅನುಪಸ್ಥಿತಿಯ ಸಂದರ್ಭದಲ್ಲಿ ಅದನ್ನು ಕುಟುಂಬದ ಹಿರಿಯ ಸದಸ್ಯರ ಖಾತೆಗೆ ವರ್ಗಾಯಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.
Advertisement
ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಗೆ ಬಿಜೆಪಿ ಕಿಡಿಕಾರಿದೆ. ಇದು ಆಕ್ಷೇಪಾರ್ಹ ಹೇಳಿಕೆ. ಸೂಕ್ತ ಕ್ರಮಕೈಗೊಳ್ಳುವಂತೆ ಭಾರತದ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ಮಂಜೂರು
Advertisement
ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಭುರಿಯಾ ಅವರನ್ನು ಟೀಕಿಸಿದರು. ವೈಯಕ್ತಿಕ ಕಾನೂನು ಹಾಗೂ ಬಹು ವಿವಾಹಗಳನ್ನು ಒಪ್ಪುವ ವ್ಯಕ್ತಿಗಳಿಗೆ ಪ್ರೋತ್ಸಾಹ ನೀಡುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ಗ್ಯಾರಂಟಿಯ ವಿಕೃತ ರೂಪಾಂತರವನ್ನು ಬಹಿರಂಗಪಡಿಸುತ್ತಾರೆ. ಇದು ಮಹಿಳಾ ಸಮ್ಮಾನ್ ಅಲ್ಲ.. ಮಹಿಳೆಯರನ್ನು ಒಂದು ವಸ್ತುವಿನಂತೆ ನಡೆಸಿಕೊಳ್ಳುವುದಾಗಿದೆ. ಇದು ತುಂಬಾ ಅಸಹ್ಯಕರ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಚಾಟಿ ಬೀಸಿದ್ದಾರೆ.