ಮುಂಬೈ: ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ಕಾಂಗ್ರೆಸ್ (Congress) ಮುಖಂಡರೊಬ್ಬರು ಹೃದಯಾಘಾತದಿಂದ (Heart Attack) ನಿಧನರಾದ ಘಟನೆ ನಡೆದಿದೆ. ಯಾತ್ರೆ ಇಂದು ಮಹಾರಾಷ್ಟ್ರದ (Maharashtra) ಗಡಿ ಪ್ರವೇಶಿಸಿದ್ದು, ಈ ವೇಳೆ ಕಾಂಗ್ರೆಸ್ ಸೇವಾದಳದ ಮುಖಂಡ ಕೃಷ್ಣಕುಮಾರ್ ಪಾಂಡೆ (Krishna Kumar Pandey) ನಿಧನರಾಗಿದ್ದಾರೆ.
ಪಾಂಡೆ ಅವರು ಕಾಂಗ್ರೆಸ್‌ನ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇಂದು ಮೆರವಣಿಗೆ ವೇಳೆ ಕುಸಿದು ಬಿದ್ದ ಪಾಂಡೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
Advertisement
ಪಾಂಡೆ ಅವರು ಯಾತ್ರೆಯಲ್ಲಿ ಸಾಗುತ್ತಿದ್ದ ವೇಳೆ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡಿದ್ದರು. ಈ ವೇಳೆ ತಮ್ಮ ಕೈಯಲ್ಲಿದ್ದ ಧ್ವಜವನ್ನು ಪಕ್ಕದಲ್ಲಿದ್ದವರಿಗೆ ನೀಡಿ, ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣ ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿಯದ್ದು ಜನ ಸಂಕಲ್ಪ ಯಾತ್ರೆ ಅಲ್ಲ, ಅದು ಜನರ ಸಂಕಷ್ಟದ ಯಾತ್ರೆ : ಯು.ಟಿ.ಖಾದರ್
Advertisement
कांग्रेस सेवा दल के महासचिव, कृष्णकांत पांडे जी का निधन पूरे कांग्रेस परिवार के लिए बहुत दुःखद है। उनके प्रियजनों को मैं अपनी गहरी संवेदनाएं व्यक्त करता हूं।
आज, यात्रा के दौरान अंतिम समय में उन्होंने हाथों में तिरंगा थामा था। देश के लिए उनका समर्पण हमें सदा प्रेरणा देता रहेगा। pic.twitter.com/VvC1O5ZJfh
— Rahul Gandhi (@RahulGandhi) November 8, 2022
Advertisement
ಪಾಂಡೆ ಅವರ ನಿಧನಕ್ಕೆ ರಾಹುಲ್ ಗಾಂಧಿ ತೀವ್ರವಾದ ಸಂತಾಪ ಸೂಚಿಸಿದ್ದಾರೆ. ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣಕಾಂತ್ ಪಾಂಡೆ ಅವರ ನಿಧನ ಇಡೀ ಕಾಂಗ್ರೆಸ್ ಕುಟುಂಬಕ್ಕೆ ದುಃಖ ತಂದಿದೆ. ಅವರ ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಇಂದು ಅವರು ತಮ್ಮ ಕೊನೆಯ ಕ್ಷಣದಲ್ಲಿ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದಿದ್ದರು. ದೇಶಕ್ಕಾಗಿ ಅವರ ಸಮರ್ಪಣೆ ಯಾವಾಗಲೂ ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿರಿಯ ನಟ ಲೋಹಿತಾಶ್ವ ವಿಧಿವಶ