ಬಾಲಚಂದ್ರ ಜಾರಕಿಹೊಳಿ ಬದಲು ಆಪ್ತ ಕಾರ್ಯದರ್ಶಿಗಳಿಂದ ಕಾಮಗಾರಿ ಉದ್ಘಾಟನೆ : ಕಾಂಗ್ರೆಸ್

Public TV
1 Min Read
lakkanna savasuddi

ಬೆಳಗಾವಿ: ‘ಅರಭಾವಿ ಕ್ಷೇತ್ರದಲ್ಲಿ ಸರ್ಕಾರಿ ಯೋಜನೆಗಳ ಕಾಮಗಾರಿಗಳನ್ನು ಶಾಸಕರ ಬದಲಿಗೆ, ಅವರ ಆಪ್ತ ಕಾರ್ಯದರ್ಶಿಗಳೇ ಉದ್ಘಾಟಿಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡುತ್ತದೆ. ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಕ್ರಮ ಜರುಗಿಸಬೇಕು’ ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಒತ್ತಾಯಿಸಿದರು.

Balachandra Jarkiholi 1

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಶಾಸಕ ಬಾಲಚಂದ್ರ ಜಾರಕಿಹೊಳಿ ಆರು ಆಪ್ತ ಕಾರ್ಯದರ್ಶಿಗಳನ್ನು ನೇಮಕ ಮಾಡಿಕೊಂಡಿದ್ದಾರೆ. ವಿವಿಧ ಯೋಜನೆಗಳಡಿ ನಿರ್ಮಿಸಿದ ಕಟ್ಟಡಗಳನ್ನು ಅವರೇ ಉದ್ಘಾಟಿಸುತ್ತಿದ್ದಾರೆ. ಇಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಶಾಸಕರು ಕಾಣೆಯಾಗಿದ್ದಾರೆ. ಆಪ್ತ ಕಾರ್ಯದರ್ಶಿಗಳು ಎಲ್ಲ ಕೆಲಸ ಮಾಡುವುದಾದರೆ ಶಾಸಕರಾದರೂ ಏಕೆ ಬೇಕು?’ ಎಂದು ಪ್ರಶ್ನಿಸಿದರು. ಇದನ್ನೂ ಓದಿ: 132 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ ಉದ್ದೇಶಪೂರ್ವಕ – ಅಮೆರಿಕ ವರದಿ ಹೇಳಿದ್ದೇನು?

congress logo 1

‘ಜನಪ್ರತಿನಿಧಿಗಳ ಬದಲಿಗೆ ಬೇರೆಯವರು ಸರ್ಕಾರಿ ಯೋಜನೆಗಳಿಗೆ ಚಾಲನೆ ನೀಡಿ ಸರ್ಕಾರಿ ನಿಯಮ ಉಲ್ಲಂಘಿಸಿದ್ದಾರೆ. ಜಿಲ್ಲಾಧಿಕಾರಿಗಳು ಇದಕ್ಕೆ ಸ್ಪಷ್ಟನೆ ನೀಡಿ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಡಿಸಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲು ನಾವೂ ಸಿದ್ಧರಿದ್ದೇವೆ. ನಮಗೂ ಅವಕಾಶ ನೀಡಬೇಕು’ ಎಂದು ತಿಳಿಸಿದರು. ಇದನ್ನೂ ಓದಿ: ಮರಿಯುಪೋಲ್‍ನಲ್ಲಿ ರಷ್ಯಾಗೆ ಶರಣಾದ ಉಕ್ರೇನ್ ಸೈನಿಕರು

‘ಅರಭಾವಿ ಕ್ಷೇತ್ರದಲ್ಲಿನ ಬೆಳವಣಿಗೆಗಳ ಕುರಿತು ಗಮನಸೆಳೆಯಲು ಡಿಸಿ ಕಚೇರಿ ಎದುರು ಪ್ರತಿಭಟಿಸಲಾಗುವುದು. ಅದಕ್ಕೂ ಸ್ಪಂದಿಸದಿದ್ದರೆ ಮುಖ್ಯಮಂತ್ರಿಗಳ ಮನೆ ಎದುರು ಧರಣಿ ನಡೆಸಲಾಗುವುದು. ಪ್ರಧಾನಿಗೆ ದೂರು ನೀಡಲಾಗುವುದು’ ಎಂದರು.

BASAVARAJ BOMMAI 1

ಮುಖಂಡ ರಮೇಶ್ ಉಟಗಿ ಮಾತನಾಡಿ, ‘ಶಾಸಕರಿಗೆ ಅಭಿವೃದ್ಧಿ ಬಗ್ಗೆ ಆಸಕ್ತಿ ಇಲ್ಲ. ಹೊಸದಾಗಿ ರಚನೆಯಾದ ಮೂಡಲಗಿ ತಾಲೂಕಿನಲ್ಲಿ ವಿವಿಧ ಇಲಾಖೆಗಳ ಕಚೇರಿಗಳೂ ಇನ್ನೂ ಆರಂಭಗೊಂಡಿಲ್ಲ. ನಿರೀಕ್ಷಿತ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ವಿವಿಧ ಯೋಜನೆಗಳ ಫಲಾನುಭವಿಗಳನ್ನು ಆಪ್ತ ಕಾರ್ಯದರ್ಶಿಗಳೇ ಆಯ್ಕೆ ಮಾಡುತ್ತಿದ್ದಾರೆ. ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ ಮೂಡಲಗಿ ಪರಿಸ್ಥಿತಿ ಬಿಹಾರಕ್ಕಿಂತಲೂ ಕಡೆಯಾಗಲಿದೆ’ ಎಂದರು.

Share This Article
Leave a Comment

Leave a Reply

Your email address will not be published. Required fields are marked *