ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಅಂತ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದ್ದಕ್ಕೆ ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಯೇ ಕಾರಣ. ಜಿಡಿಪಿ ದರ 8.2 ಇದೆ ಅಂತ ಕೇಂದ್ರ ಕೊಚ್ಚಿಕೊಳ್ಳುತ್ತಿದೆ. ಆದ್ರೆ, ಅವರದ್ದೇ ಸಮೀಕ್ಷೆಯಲ್ಲಿ ಅದು ಶೇ. 7.2 ಅಂತ ದಾಖಲಾಗಿದೆ ಅಂತ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಎರಡು ವರ್ಷದ ಬಳಿಕ ಅತಿ ಹೆಚ್ಚು ಜಿಡಿಪಿ ಪ್ರಗತಿ ದಾಖಲು
Advertisement
Advertisement
ನಮ್ಮ ಅಧಿಕಾರಾವಧಿಯಲ್ಲಿ ಕಚ್ಚಾ ತೈಲದ ಬೆಲೆ ಜಾಸ್ತಿ ಇದ್ರೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರಲಿಲ್ಲ. ಆದ್ರೆ, ಸದ್ಯ ಡೀಸೆಲ್ ಬೆಲೆಯೇ 70ರ ಗಡಿ ದಾಟಿದೆ. ತೈಲ ಬೆಲೆ ಏರಿಕೆಯಿಂದ ರೈತ ಸಂಕಷ್ಟಕ್ಕೀಡಾಗಿದ್ದಾನೆ ಅಂದ್ರು. ಇದನ್ನೂ ಓದಿ: ಶನಿವಾರದಿಂದ ಬೈಕು-ಕಾರುಗಳ ವಿಮೆ ದುಬಾರಿ: ಎಷ್ಟು ಸಿಸಿಗೆ ಎಷ್ಟು ಹಣ ಪಾವತಿಸಬೇಕು?
Advertisement
ರೈತರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆರೋಪಿಸಿದರಲ್ಲದೇ, ತಪ್ಪು ಆರ್ಥಿಕ ನೀತಿಯಿಂದ ಕೇಂದ್ರ ಮನ ಬಂದಂತೆ ಹಣ ವ್ಯಯಿಸುತ್ತಿದ್ದು, ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. 2ಕೋಟಿ ನಿರುದ್ಯೋಗಿಗಳಿಗೆ ನೌಕರಿ ಕೊಡುವ ಭರವಸೆ ಹುಸಿಯಾಗಿದೆ. ಅಲ್ಲದೇ ಆರ್ಥಿಕವಾಗಿ, ಸಾಮಾಜಿಕವಾಗಿ ಮೋದಿ ಸರ್ಕಾರ ದೇಶವನ್ನ ಹಾಳು ಮಾಡುತ್ತಿದ್ದು, ಸಂವಿಧಾನ, ಪ್ರಜಾ ಪ್ರಭುತ್ವಕ್ಕೆ ಕೇಂದ್ರ ಬೆಲೆಯೇ ಕೊಡುತ್ತಿಲ್ಲ ಅಂತ ಗಂಭೀರವಾಗಿ ಆರೋಪಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv