ನವದೆಹಲಿ: 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಶಿಕ್ಷೆ ನೀಡಿದೆ.
Advertisement
Advertisement
ಏನಿದು ಪ್ರಕರಣ?
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಸ್ಥಳೀಯ ಕೋರ್ಟ್, ಹೈಕೋರ್ಟ್ ಬಳಿಕ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದನ್ನೂ ಓದಿ: ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ AIMIM ನಾಯಕ ಅರೆಸ್ಟ್
Advertisement
ಸುಪ್ರೀಂ ನ್ಯಾಯಮೂರ್ತಿಗಳಾದ ಜೆ.ಚೆಲಮೇಶ್ವರ ಮತ್ತು ಸಂಜಯ್ ಕಿಶನ್ ಕೌಲ್ ಅವರನ್ನೊಳಗೊಂಡ ನ್ಯಾಯಪೀಠ 2018ರಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿ 1000 ರೂಪಾಯಿ ದಂಡ ವಿಧಿಸಿತ್ತು. ಆದರೆ ಜೈಲು ಶಿಕ್ಷೆಯಿಂದ ಸಿಧುಗೆ ವಿನಾಯಿತಿ ನೀಡಲಾಗಿತ್ತು.
Advertisement
ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದ್ದನ್ನು ಪ್ರಶ್ನಿಸಿ ಸಂತ್ರಸ್ತನ ಕುಟುಂಬದ ಸದಸ್ಯರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.