ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ

Public TV
1 Min Read
ASKAR FARNANDIS e1626957573968

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಅವರು ಇಹಲೋಕ ತ್ಯಜಿಸಿದ್ದಾರೆ.

ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ  ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

oscar fernandes3

ಕಾಂಗ್ರೆಸ್ ನಾಯಕರಾದ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು. ಅಲ್ಲದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಫರ್ನಾಂಡಿಸ್ ಅವರ ಕುಟುಂಬಸ್ಥರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.

OSCAR 2 e1626957696842

ಆಸ್ಕರ್ ಫರ್ನಾಂಡಿಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಫರ್ನಾಂಡಿಸ್ ಗುರುತಿಸಿಕೊಂಡಿದ್ದರು. ಪಕ್ಷದಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಪ್ರಮುಖ ನಾಯಕರ ಪೈಕಿ ಆಸ್ಕರ್ ಫರ್ನಾಂಡಿಸ್ ಅವರು ಸಹ ಒಬ್ಬರಾಗಿದ್ದರು. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಹ ಕೆಲಸ ಮಾಡಿದ್ದರು.

OSCAR RAHUL

ಫರ್ನಾಂಡಿಸ್ ಅವರು ಮಾರ್ಚ್ 27, 1941ರಲ್ಲಿ ಉಡುಪಿಯಲ್ಲಿ ಜನಿಸಿದ್ದರು. ಜನವರಿ 18, 1980 ರಲ್ಲಿ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ 17 ಜೂನ್ 2013ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾಗಿದ್ದರು. ಒಟ್ಟು ಐದು ಬಾರಿ ಉಡುಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಬಳಿಕ 2004ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *