ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election) ಪ್ರಚಾರಕ್ಕೆ ಆಗಮಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಹೊಸ ಸ್ನೇಹಿತರನ್ನ ಪರಿಚಯ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
View this post on Instagram
ತಮ್ಮ ಇನ್ಸ್ಟಾಗ್ರಾಮ್ (Instagram) ಖಾತೆಯಲ್ಲಿ ಆನೆಯೊಂದಿಗಿನ ಫೋಟೋವೊಂದನ್ನು ಹಂಚಿಕೊಂಡಿರುವ ಅವರು, ಕರ್ನಾಟಕ ಪ್ರಚಾರದ ಸಮಯದಲ್ಲಿ ಹೊಸ ಸ್ನೇಹಿತರನ್ನು (Karnataka Friends) ಮಾಡಿಕೊಂಡಿರುವುದಾಗಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಆನೆ, ಹೃದಯ ಹಾಗೂ ಮೇಕೆಯೊಂದರ ಎಮೋಜಿಯನ್ನು ಬಳಸಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 9 ವರ್ಷಗಳ ಬಳಿಕ ದೇಗುಲದಲ್ಲಿ ಕದ್ದ ಆಭರಣ ವಾಪಸ್ ನೀಡಿದ ಕಳ್ಳ!
ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ತಲೆಯ ಮೇಲೆ ಆನೆಯೊಂದು ತನ್ನ ಸೊಂಡಿಲನ್ನು ಇರಿಸಿ, ಆಶೀರ್ವದಿಸುತ್ತಿದೆ. ಈ ಫೋಟೋವನ್ನು ಹಂಚಿಕೊಂಡ ಒಂದು ಗಂಟೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಲಯಾಳಂ ಚಿತ್ರೋದ್ಯಮದಲ್ಲಿ ಡ್ರಗ್ಸ್: ಸಿಡಿದೆದ್ದ ಪೊಲೀಸ್ ಕಮಿಷನರ್
ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 66, ಜೆಡಿಎಸ್ 19 ಹಾಗೂ ಪಕ್ಷೇತರ 4 ಸ್ಥಾನಗಳು ಬಂದಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಕ್ಕಾಗಿ ಪ್ರಿಯಾಂಕಾ ಗಾಂಧಿ ಅಭಿನಂದನೆಯನ್ನೂ ಸಲ್ಲಿಸಿದ್ದಾರೆ.