ಹೈದರಾಬಾದ್: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ತಳ್ಳಾಟ ನಡೆದಿದ್ದರಿಂದ ಕಾಂಗ್ರೆಸ್ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಇಂಧನ ಸಚಿವ ನಿತಿನ್ ರಾವತ್ (Nitin Raut) ಅವರ ಕಣ್ಣಿಗೆ ಗಂಭೀರವಾಗಿ ಗಾಯವಾಗಿದೆ. ಕಾಂಗ್ರೆಸ್ (Congress) ನಾಯಕನನ್ನು ಚಿಕಿತ್ಸೆಗಾಗಿ ಹೈದರಾಬಾದ್‌ನ (Hyderabad) ವಾಸವಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದಲ್ಲಿ ರಾಹುಲ್ ಗಾಂಧಿ (Rahul Gandhi) ನೇತೃತ್ವದ ರಾಷ್ಟ್ರವ್ಯಾಪಿ ಪಾದಯಾತ್ರೆ ನಡೆಸುತ್ತಿದ್ದ ವೇಳೆ ಪೊಲೀಸರು ತಮ್ಮನ್ನು ತಳ್ಳಿರುವುದಾಗಿ ನಿತಿನ್ ರಾವತ್ ಆರೋಪಿಸಿದ್ದಾರೆ. ಘಟನೆಯಲ್ಲಿ ಅವರ ಬಲಗಣ್ಣು ಮಾತ್ರವಲ್ಲದೇ ಕೈ, ಕಾಲುಗಳಿಗೂ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:
Advertisement
Advertisement
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಹೈದರಾಬಾದ್ ತಲುಪಿ, ಸತತ 2ನೇ ದಿನಯ ಯಾತ್ರೆ ಇಂದು ಮುಂದುವರಿದಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಮುಖ್ಯಸ್ಥ ಎ. ರೇವಂತ್ ರೆಡ್ಡಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ, ಸಂಸದ ಉತ್ತಮ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ: