ನವದೆಹಲಿ: ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು, ರಾಹುಲ್ ಸಾವರ್ಕರ್ ಅಲ್ಲ. ಸತ್ಯ ಹೇಳಿದ್ದೇನೆ ಹೀಗಾಗಿ ಕ್ಷಮೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.
ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಸತ್ಯ ಹೇಳಿದ್ದರ ಕುರಿತು ನಾನೆಂದೂ ಕ್ಷಮೆಯಾಚಿಸುವುದಿಲ್ಲ. ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು ರಾಹುಲ್ ಸಾವರ್ಕರ್ ಅಲ್ಲ. ನಾನೂ ಕ್ಷಮೆಯಾಚಿಸುವುದಿಲ್ಲ, ಕಾಂಗ್ರೆಸ್‍ನ ಯಾವ ನಾಯಕರೂ ಈ ರೀತಿ ಕ್ಷಮೆಯಚಿಸುವುದಿಲ್ಲ ಎಂದರು.
Advertisement
#WATCH: Rahul Gandhi,at 'Bharat Bachao' rally: I was told in Parliament by BJP y'day 'Rahul ji, you gave a speech. Apologise for that.' I was told to apologise for speaking something correct. My name is not Rahul Savarkar. My name is Rahul Gandhi. I will never apologise for truth pic.twitter.com/DhgFyZNX1a
— ANI (@ANI) December 14, 2019
Advertisement
ಕ್ಷಮೆ ಕೇಳಬೇಕಿರುವುದು ನಾನಲ್ಲ. ದೇಶದ ಆರ್ಥಿಕತೆಯನ್ನು ನಾಶಪಡಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಹಾಯಕ ಅಮಿತ್ ಶಾ ಕ್ಷಮೆಯಾಚಿಸಬೇಕು. ಲೋಕಸಭೆಯ ಅಧಿವೇಶನದಲ್ಲಿಯೂ ನಾನು ಈ ಕುರಿತು ಸ್ಪಷ್ಟಪಡಿಸಿದ್ದೇನೆ. ನಾನು ಸತ್ಯ ಹೇಳಿದ್ದೇನೆ ಹೀಗಾಗಿ ಕ್ಷಮೆ ಕೇಳುವುದಿಲ್ಲ ತಿರಸ್ಕರಿಸಿದರು.
Advertisement
ತಮ್ಮ ಹೇಳಿಕೆ ಕುರಿತು ಲೋಕಸಭೆಯ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟಪಡಿಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡುತ್ತಾರೆ. ಆದರೆ ಯಾವುದೇ ಪತ್ರಿಕೆಗಳನ್ನು ತೆರೆದು ನೋಡಿದರೂ ಅದರಲ್ಲಿ ಬಹುತೇಕ ಅತ್ಯಾಚಾರದ ಸುದ್ದಿಗಳೇ ಕಣ್ಣಿಗೆ ಕಾಣುತ್ತವೆ. ಹೀಗಾಗಿ ಎಲ್ಲಿ ನೋಡಿದರೂ ರೇಪ್ ಇನ್ ಇಂಡಿಯಾ ಆಗಿದೆ ಎಂದು ಹೇಳಿಕೆ ನೀಡಿದೆ ಎಂದರು.
Advertisement
Delhi: Congress Interim President Sonia Gandhi, former PM Dr Manmohan Singh, Rahul Gandhi and other leaders of the party at 'Bharat Bachao' rally, at Ramlila Maidan. pic.twitter.com/aqzs2dyQe0
— ANI (@ANI) December 14, 2019
ಜಾರ್ಖಂಡ್‍ನಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು ಮಾತನಾಡಿದ್ದ ಅವರು, ಪ್ರಧಾನಿ ಮೋದಿ ಮೇಕ್ ಇಂಡಿಯಾ ಎಂದು ಹೇಳುತ್ತಾರೆ. ಆದರೆ ದೇಶದಲ್ಲಿ ಎಲ್ಲಿ ನೋಡಿದರೂ ರೇಪ್ ಇನ್ ಇಂಡಿಯಾ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಆಡಳಿತ ಪಕ್ಷಗಳು ಭಾರೀ ಆಕ್ರೋಶ ವ್ಯಕ್ತಪಡಿಸಿ, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದವು. ಅಲ್ಲದೆ ಈ ಕುರಿತು ಲೋಕಸಭೆಯಲ್ಲಿ ಸಹ ಪಟ್ಟು ಹಿಡಿಯುವ ಮೂಲಕ ಗದ್ದಲ ಎಬ್ಬಿಸಲಾಗಿತ್ತು.