Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಗ ಭಾಷಣ ಮಾಡಿದ್ದಕ್ಕೆ ಅನರ್ಹತೆ; ಈಗ ಸತ್ಯಮೇವ ಜಯತೆ – ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಗಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಗ ಭಾಷಣ ಮಾಡಿದ್ದಕ್ಕೆ ಅನರ್ಹತೆ; ಈಗ ಸತ್ಯಮೇವ ಜಯತೆ – ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಗಾ

Bengaluru City

ಆಗ ಭಾಷಣ ಮಾಡಿದ್ದಕ್ಕೆ ಅನರ್ಹತೆ; ಈಗ ಸತ್ಯಮೇವ ಜಯತೆ – ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಗಾ

Public TV
Last updated: March 29, 2023 9:40 pm
Public TV
Share
2 Min Read
rahul gandhi 5
SHARE

ಬೆಂಗಳೂರು: ಅದು 2019ರ ಲೋಕಸಭೆ (Lok Sabha) ಚುನಾವಣೆ ಸಂದರ್ಭ. ಆಗ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹೊತ್ತಿನಲ್ಲಿ ಅದೇ ಕೋಲಾರ ನೆಲದಿಂದಲೇ ಕಾಂಗ್ರೆಸ್‌ (Congress) ನಾಯಕರ ಜೊತೆಗೂಡಿ ‘ಸತ್ಯಮೇವ ಜಯತೆ’ ಹೋರಾಟ ಆರಂಭಿಸಲು ರಾಹುಲ್‌ ಗಾಂಧಿ ಬರುತ್ತಿದ್ದಾರೆ.

ತಾನು ಸಂಸದ ಸ್ಥಾನದಿಂದ ಅನರ್ಹಗೊಳ್ಳಲು ಕಾರಣವಾಗಿದ್ದ ನೆಲದಿಂದಲೇ ಈಗ ಮತ್ತೆ ಹೋರಾಟ ನಡೆಸಲು ರಾಹುಲ್‌ ಗಾಂಧಿ ಆಗಮಿಸುತ್ತಿದ್ದಾರೆ. “ಏ.5 ರಂದು ಕೋಲಾರಕ್ಕೆ ಬಂದು ಮಹಾತ್ಮ ಗಾಂಧೀಜಿ ಅವರ ಮೂಲ ಮಂತ್ರವಾದ ‘ಸತ್ಯಮೇವ ಜಯತೆ’ ಹೋರಾಟ ನಡೆಸಲಿದ್ದಾರೆಂದು” ಕಾಂಗ್ರೆಸ್‌ ನಾಯಕರು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

congress flag

2019ರಲ್ಲಿ ಏನಾಗಿತ್ತು?
2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ರಾಹುಲ್‌ ಗಾಂಧಿ ಭಾಷಣ ಮಾಡಿದ್ದರು. “ಎಲ್ಲ ಕಳ್ಳರ ಉಪನಾಮ ಮೋದಿ ಎಂದೇ ಯಾಕಿರುತ್ತದೆ”? ಎಂದು ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ ವ್ಯಂಗ್ಯವಾಡಿದ್ದರು. ಈ ಸಂಬಂಧ ಸೂರತ್‌ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಾಗಿತ್ತು. ಪ್ರಕರಣಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿತ್ತು. ಜತೆಗೆ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತಿನಲ್ಲಿರಿಸಿ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಮಾರ್ಚ್‌ 23ರಿಂದ ಅನ್ವಯವಾಗುವಂತೆ ರಾಹುಲ್‌ ಗಾಂಧಿಯವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಲಾಗಿದೆ.

ವಯನಾಡ್‌ ಕ್ಷೇತ್ರ ತೆರವು
ರಾಹುಲ್‌ ಗಾಂಧಿ ಪ್ರತಿನಿಧಿಸುತ್ತಿದ್ದ ವಯನಾಡ್‌ ಕ್ಷೇತ್ರ ಸದ್ಯ ತೆರವಾಗಿದೆ. ಇನ್ನು 6 ತಿಂಗಳಲ್ಲಿ ಚುನಾವಣಾ ಆಯೋಗವು ಚುನಾವಣೆ ನಡೆಸಬೇಕಿದೆ. ಜೊತೆಗೆ ದೆಹಲಿಯಲ್ಲಿ ಕೇಂದ್ರ ಸರ್ಕಾರ ನೀಡಿರುವ ಸರ್ಕಾರಿ ಬಂಗಲೆಯನ್ನು ಸಹ ರಾಹುಲ್‌ ಗಾಂಧಿ ತೊರೆಯಬೇಕಿದೆ. ಇದನ್ನೂ ಓದಿ: ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್

Rahul Gandhi 2

ಏ.5ಕ್ಕೆ ರಾಹುಲ್‌ ಮತ್ತೆ ಕೋಲಾರಕ್ಕೆ
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಅತ್ತ ರಾಹುಲ್‌ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ ನಾಯಕರು ಹಾಗೂ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ. ರಾಹುಲ್‌ ಗಾಂಧಿ ಅನರ್ಹತೆ ಸಂವಿಧಾನಬಾಹಿರ, ಪ್ರಜಾಪ್ರಭುತ್ವ ವಿರೋಧಿ ಹಾಗೂ ವಿಪಕ್ಷಗಳನ್ನು ಹತ್ತಿಕ್ಕುವ ಹುನ್ನಾರ ಎಂದು ಟೀಕಿಸಿವೆ. ಅಲ್ಲದೇ ಅನರ್ಹತೆ ಖಂಡಿಸಿ ದೇಶಾದ್ಯಂತ ಹೋರಾಟ ಕೂಡ ನಡೆಸಲಾಗುತ್ತಿದೆ. ಕರ್ನಾಟಕದಲ್ಲೂ ಕೋಲಾರದಿಂದಲೇ ‘ಸತ್ಯಮೇವ ಜಯತೆ’ ಹೆಸರಿನಲ್ಲಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಏ.5 ರಂದು ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕವನ್ನು ಪ್ರಕಟಿಸಿದ್ದಾರೆ. ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಇದನ್ನೂ ಓದಿ: ಧನ್ಯವಾದ, ಮನೆ ಖಾಲಿ ಮಾಡುವೆ – ಲೋಕಸಭೆಯ ವಸತಿ ಸಮಿತಿ ಪತ್ರಕ್ಕೆ ರಾಗಾ ಉತ್ತರ

TAGGED:congresskolaraRahul GandhiSatyameva Jayateಕಾಂಗ್ರೆಸ್ಕೋಲಾರರಾಹುಲ್ ಗಾಂಧಿಸತ್ಯಮೇವ ಜಯತೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
17 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
43 minutes ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
1 hour ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
2 hours ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
3 hours ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?