ನವದೆಹಲಿ: ಇಂದು ಸ್ಯಾಂಡಲ್‌ವುಡ್ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ (Dr. Puneeth Rajkumar) ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಭಕೋರಿದ್ದಾರೆ.
ಈ ಸಂಬಂಧ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಪ್ಪು ಫೋಟೋದ ಜೊತೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನದಂದು ಅವರಿಗೆ ವಿನಮ್ರ ನಮನಗಳು. ಒಬ್ಬ ಅದ್ಭುತ ಕಲಾವಿದ, ಸಿನಿಮಾದಲ್ಲಿನ ಅವರ ಕೆಲಸ ಮತ್ತು ಜನರ ಕಲ್ಯಾಣಕ್ಕಾಗಿ ಅವರು ನೀಡಿರುವ ಕೊಡುಗೆ ಇಂದಿಗೂ ಅನೇಕರಿಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.
- Advertisement
ರಾಹುಲ್ ಗಾಂಧಿಯವರು (Rahul Gandhi) ಪುನೀತ್ ರಾಜ್ ಕುಮಾರ್ ಅವರು ನಿಧನರಾದ ಸಂದರ್ಭದಲ್ಲಿಯೂ ಟ್ವೀಟ್ ಮಾಡಿದ್ದರು. ಕನ್ನಡ ನಟ ಪುನೀತ್ ರಾಜ್‌ಕುಮಾರ್ ಅವರ ಕುಟುಂಬ, ಅಭಿಮಾನಿಗಳು ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದರು. ಅಲ್ಲದೇ ಕೆಲ ದಿನಗಳ ಬಳಿಕ ಪುನೀತ್ ಕುಟುಂಬ ಭೇಟಿಯಾಗಿ ಸಾಂತ್ವನ ಹೇಳಿದರು. ಇದೀಗ ನಟನ ಜನ್ಮದಿನವಾದ ಇಂದು ಕೂಡ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ನೆನಪಿನಲ್ಲಿ ಅಶ್ವಿನಿ- ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ ಎಂದ ಪತ್ನಿ
- Advertisement
ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಪುಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಭಿಮಾನಿಗಳಿಂದ ಸೆಲೆಬ್ರಿಟಿಗಳವರೆಗೂ ಎಲ್ಲರೂ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಸಾಮಾಜಿಕ ಜಾತಲತಾಣಗಳಲ್ಲಿ ಅಪ್ಪು ಫೋಟೋ ಹಾಕಿ ವಿಶೇಷವಾಗಿ ಸಂಭ್ರಮಿಸುತ್ತಿದ್ದಾರೆ. ಇನ್ನೂ ಕೆಲವರು ಅಪ್ಪು ಸಮಾಧಿ ಬಳಿ ಹೋಗಿ ಪೂಜೆ ಸಲ್ಲಿಸುತ್ತಿದ್ದಾರೆ.