DharwadDistrictsKarnatakaLatestLeading NewsMain Post

ಹುಬ್ಬಳ್ಳಿಯ ಜಿಮ್‍ನಲ್ಲಿ ಬಿಗಿ ಭದ್ರತೆಯಲ್ಲಿಯೇ ರಾಹುಲ್ ಗಾಂಧಿ ವರ್ಕೌಟ್

Advertisements

ಹುಬ್ಬಳ್ಳಿ: ಸಿದ್ದರಾಮೋತ್ಸವಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಿಮ್ ನಲ್ಲಿ ವರ್ಕೌಟ್ ಮಾಡಿದ್ದಾರೆ.

ಖಾಸಗಿ ಹೋಟೆಲ್ ಜೀಮ್ ನಲ್ಲಿ ರಾಗಾ ಬೆವರಿಳಿಸಿದ್ದಾರೆ. ವರ್ಕೌಟ್ ನಡುವೆ ಜೀಮ್ ನಲ್ಲಿಯೇ ವಾಕಿಂಗ್ ಕೂಡ ಮಾಡಿದ್ದಾರೆ. ಈ ಮೂಲಕ ಸತತ ಪ್ರಯಾಣ, ರಾಜಕೀಯ ಜಂಜಾಟದ ನಡುವೆಯೂ ರಾಗಾ ಆರೋಗ್ಯದ ಕಾಳಜಿ ವಹಿಸುತ್ತಿರುವುದನ್ನು ಗಮನಿಸಬಹುದು. ಇತ್ತ ಜಿಮ್ ನಲ್ಲಿಯೂ ರಾಹುಲ್ ಗಾಂಧಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಇದನ್ನೂ ಓದಿ; ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಬರ್ತ್ ಡೇ ಆಚರಣೆ – ಸರಿಯಾಗಿ 12 ಗಂಟೆಗೆ ಕೇಕ್ ಕಟ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ವಸಂತಕ್ಕೆ ಕಾಲಿಟ್ಟಿದ್ದು, ಹೀಗಾಗಿ ಅವರ ಅಭಿಮಾನಿ ಬಳಗ, ದಾವಣಗೆರೆಯ ಶಾಮನೂರು ಮೈದಾನದಲ್ಲಿ ಸಿದ್ದರಾಮಯ್ಯ-75, ಅಮೃತ ಮಹೋತ್ಸವ ಹಮ್ಮಿಕೊಂಡಿದೆ. ಕಾರ್ಯಕ್ರಮದ ಮುಖ್ಯ ಅತಿಥಿ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಆಗಮಿಸಿ ಬಳಿಕ ಖಾಸಗಿ ಹೋಟೆಲ್‍ನಲ್ಲಿ ರಾಜ್ಯ ಕಾಂಗ್ರೆಸ್‍ನ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸಿದ್ದಾರೆ.

Live Tv

Leave a Reply

Your email address will not be published.

Back to top button