ಭೋಪಾಲ್: ಸಂವಿಧಾನ ಉಳಿಸಲು ಪ್ರಧಾನಿ ಮೋದಿ (Narendra Modi) ಹತ್ಯೆ ಮಾಡಿ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ರಾಜಾ ಪಟೇರಿಯಾ (Raja Pateria) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಪಟೇರಿಯಾ ಅವರು, “ಸಂವಿಧಾನವನ್ನು ಉಳಿಸಲು ಪಿಎಂ ಮೋದಿಯನ್ನು ಕೊಲ್ಲಬೇಕು” ಎಂದು ಸಭೆಯೊಂದರಲ್ಲಿ ಹೇಳಿಕೆ ನೀಡಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪಟೇರಿಯಾ ಅವರ ಹೇಳಿಕೆಗಳನ್ನು ಆಧರಿಸಿ, ಮಧ್ಯಪ್ರದೇಶ (Madhyapradesh) ಸರ್ಕಾರವು ಮಾಜಿ ಸಚಿವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಆದೇಶಿಸಿತ್ತು. ಇದನ್ನೂ ಓದಿ: ಸಂವಿಧಾನ ಉಳಿಸಲು ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ಮಾಜಿ ಸಚಿವ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ
Advertisement
Advertisement
ಪನ್ನಾದ ಪಾವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ನಾಯಕನ ಹೇಳಿಕೆಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, “ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬಂದಿದೆ” ಎಂದು ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿ ಟೀಕೆ ವ್ಯಕ್ತಪಡಿಸಿದ್ದಾರೆ.
Advertisement
ಸಭೆಯೊಂದರಲ್ಲಿ ಪಟೇರಿಯಾ ಮಾತನಾಡಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. “ಪ್ರಧಾನಿ ಮೋದಿ (Narendra Modi) ಅವರು ಧರ್ಮದ ಆಧಾರದ ಮೇಲೆ ಜನರನ್ನ ವಿಭವಿಸುತ್ತಿದ್ದಾರೆ. ಮೋದಿ ಅವರ ಆಡಳಿತದಲ್ಲಿ ದಲಿತರು (Dalits) ದೊಡ್ಡ ಬೆದರಿಕೆ ಎದುರಿಸುತ್ತಿದ್ದಾರೆ. ನೀವು ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು. ಕೊಲ್ಲುವುದೆಂದರೆ ಹತ್ಯೆ ಮಾಡುವುದಲ್ಲ. ಅವರನ್ನು ಸೋಲಿಸಬೇಕು” ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಗಡಿಯಲ್ಲಿ ಮತ್ತೆ ಬಡಿದಾಟ – ಚೀನಿ ಯೋಧರಿಗೆ ತಿರುಗೇಟು ಕೊಟ್ಟ ಭಾರತ
Advertisement
ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ, ಮಾಜಿ ಸಚಿವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ನಂತರ ಇದಕ್ಕೆ ಸ್ಪಷ್ಟನೆ ನೀಡಿದ್ದ ಪಟೇರಿಯಾ, “ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಗಾಂಧಿಯನ್ನು ನಂಬುವ ವ್ಯಕ್ತಿ, ಈ ರೀತಿ ಮಾತನಾಡಲಾರೆ. ಸಂವಿಧಾನ (Constitution Of India) ಉಳಿಸಲು ಮೋದಿ ಅವರನ್ನು ಸೋಲಿಸಬೇಕು ಅನ್ನೋ ಅರ್ಥದಲ್ಲಿ ಮಾತನಾಡಿದ್ದೇನೆ” ಎಂದು ತಿಳಿಸಿದ್ದರು.