ಭೋಪಾಲ್: ಮಧ್ಯಪ್ರದೇಶದ (MadyaPradesh) ಮಾಜಿ ಸಚಿವ ಹಾಗೂ ಕಾಂಗ್ರೆಸ್ (Congress) ನಾಯಕ ಆಗಿರುವ ರಾಜಾ ಪಟೇರಿಯಾ (Raja Pateria), ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ.
Congress leader & former minister Raja Pateria incites people to kill PM Modi – earlier too Cong leaders spoke about death of PM Modi (Sheikh Hussain)
But now a death threat!
After “Aukat dikha denge” “Raavan” this is Rahul Gandhi’s Pyaar ki Rajniti? Will they act on him? No! pic.twitter.com/wH6LSi63g2
— Shehzad Jai Hind (@Shehzad_Ind) December 12, 2022
Advertisement
ಸರಳ ಸಭೆಯೊಂದರಲ್ಲಿ ಪಟೇರಿಯಾ ಮಾತನಾಡಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಸದ್ದು ಮಾಡುತ್ತಿದೆ. ಸಭೆಯಲ್ಲಿ ಮಾತನಾಡುತ್ತಾ, `ಪ್ರಧಾನಿ ಮೋದಿ (Narendra Modi) ಅವರು ಧರ್ಮದ ಆಧಾರದ ಮೇಲೆ ಜನರನ್ನ ವಿಭವಿಸುತ್ತಿದ್ದಾರೆ. ಮೋದಿ ಅವರ ಆಡಳಿತದಲ್ಲಿ ದಲಿತರು (Dalits) ದೊಡ್ಡ ಬೆದರಿಕೆ ಎದುರಿಸುತ್ತಿದ್ದಾರೆ. ನೀವು ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು. ಕೊಲ್ಲುವುದೆಂದರೆ ಹತ್ಯೆ ಮಾಡುವುದಲ್ಲ. ಅವರನ್ನು ಸೋಲಿಸಬೇಕು’ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯ್ತಾ? – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
Advertisement
Advertisement
ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಮಾಜಿ ಸಚಿವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ನಂತರ ಇದಕ್ಕೆ ಸ್ಪಷ್ಟನೆ ನೀಡಿರುವ ಪಟೇರಿಯಾ, ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಗಾಂಧಿಯನ್ನು ನಂಬುವ ವ್ಯಕ್ತಿ, ಈ ರೀತಿ ಮಾತನಾಡಲಾರೆ. ಸಂವಿಧಾನ (Constitution Of India) ಉಳಿಸಲು ಮೋದಿ ಅವರನ್ನು ಸೋಲಿಸಬೇಕು ಅನ್ನೋ ಅರ್ಥದಲ್ಲಿ ಮಾತನಾಡಿದ್ದೇನೆ. ದಲಿತರು, ಆದಿವಾಸಿಗಳನ್ನು ರಕ್ಷಿಸಲು ಹಾಗೂ ನಿರುದ್ಯೋಗ ಸಮಸ್ಯೆಯನ್ನು ತೊಡೆದುಹಾಕಲು ಮೋದಿಯನ್ನು ಸೋಲಿಸುವುದು ಅವಶ್ಯಕ ಎಂಬ ಅರ್ಥದಲ್ಲಿ ಹೇಳಿದ್ದೇನೆ. ಆದರೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 200 ಸಂತರ ಸಮ್ಮುಖದಲ್ಲಿ ಇಂದು ಗುಜರಾತ್‍ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ
Advertisement
ಕಾಂಗ್ರೆಸ್ ನಾಯಕನ ಹೇಳಿಕೆಯಿಂದ ಬಿಜೆಪಿ ಪಾಳಯ ಕೆಂಡಾಮಂಡಲವಾಗಿದೆ. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಅವರು, ಕೇಸ್ ದಾಖಲಿಸುವಂತೆ ಪನ್ನಾ ಪೊಲೀಸ್ ಠಾಣೆಗೆ ಸೂಚಿಸಿದ್ದಾರೆ. ನಾನು ಪಟೇರಿಯಾ ಹೇಳಿಕೆಯನ್ನ ಕೇಳಿದ್ದೇನೆ. ಈ ಕಾಂಗ್ರೆಸ್ ಪಕ್ಷವು ಮಹಾತ್ಮ ಗಾಂಧಿಯವರದ್ದಲ್ಲ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ. ಆದ್ದರಿಂದ `ಈ ಕಾಂಗ್ರೆಸ್ ಇಟಲಿಗೆ ಸೇರಿದ್ದು, ಅದರ ಸಿದ್ಧಾಂತ ಮುಸಲೋನಿಯದ್ದು’ ಎಂದು ಎಫ್‌ಐಆರ್ ದಾಖಲಿಸುವಂತೆ ಎಸ್‌ಪಿಗೆ ಸೂಚನೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.