ಚಿಕ್ಕಬಳ್ಳಾಪುರ: ಶಿಡ್ಲಘಟ್ಟ (Shidlaghatta) ನಗರಸಭೆಯ ಪೌರಾಯುಕ್ತೆ ಅಮೃತ ಗೌಡರಿಗೆ ಕರೆ ಮಾಡಿ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ (Rajeev Gowda) ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರ ಎರಡನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ರಾಜೀವ್ ಗೌಡ ಪರ ವಕೀಲ ಶಿವಶಂಕರ ರೆಡ್ಡಿ ಇಂದು ನ್ಯಾಯಾಲಯದ ಪ್ರಕರಣದ ಸಂಖ್ಯೆ 11-2026 ರ ಅನ್ವಯ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಫ್ಲೆಕ್ಸ್ ತೆರವು ವಿಚಾರಕ್ಕೆ ಪೌರಾಯುಕ್ತೆಗೆ ಧಮ್ಕಿ; ರಾಜೀವ್ ಗೌಡಗೆ ಕೆಪಿಸಿಸಿ ನೋಟಿಸ್ ಜಾರಿ
ರಾಜೀವ್ ಗೌಡ ಬಂಧನದ ಭೀತಿಯಿಂದ ತಲೆಮರೆಸಿಕೊಂಡು ಮೂರು ದಿನಗಳು ಕಳೆದಿವೆ. ಕಾಂಗ್ರೆಸ್ ಮುಖಂಡನ ಬಂಧನಕ್ಕೆ ಮೂರು ಮಂದಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಎಸ್‌ಪಿ ಕುಶಲ್ ಚೌಕ್ಸಿ ತಂಡಗಳನ್ನು ನೇಮಕ ಮಾಡಿದ್ದಾರೆ. ರಾಜೀವ್ ಗೌಡಗಾಗಿ ಮೂರು ದಿನಗಳಿಂದಲೂ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದು, ಸಣ್ಣ ಸುಳಿವು ಸಹ ಪೊಲೀಸರಿಗೆ ಸಿಗುತ್ತಿಲ್ಲ.
ಸಾರ್ವಜನಿಕರು, ಸಂಘಟನೆಗಳು ಹಾಗೂ ವಿರೋಧ ಪಕ್ಷದ ನಾಯಕರು ಸೇರಿದಂತೆ ಸ್ವಪಕ್ಷದ ಶಾಸಕರು, ರಾಜೀವ್ ಗೌಡ ಬಂಧನ ಆಗುತ್ತಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ. ಮತ್ತೊಂದೆಡೆ ರಾಜ್ಯದ ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ಪರ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನಗಳಾಗುತ್ತಿದ್ದರೂ ರಾಜೀವ್ ಗೌಡ ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ. ಇದರ ನಡುವೆ ರಾಜೀವ್ ಗೌಡ ಪರ ವಕೀಲರು ಜಾಮಿನಿಗೆ ಇಂದು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಅಮೃತಗೌಡಗೆ ಬೆದರಿಕೆ – 2 ಫೋನ್ ಸ್ವಿಚ್ ಆಫ್ ಮಾಡಿ ಕೈ ನಾಯಕ ರಾಜೀವ್ ಗೌಡ ಪರಾರಿ

