ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿರುವುದನ್ನು ಖಂಡಿಸಿ ಇಂದು ನಡೆದ `ಚಲೋ ರಾಜಭವನ್’ ಪ್ರತಿಭಟನೆ ವೇಳೆ ಕಾಂಗ್ರೆಸ್ ಮಹಿಳಾ ನಾಯಕಿಯೊಬ್ಬರು ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದು ಎಳೆದಾಡಿರುವ ಘಟನೆ ನಡೆದಿದೆ.
#WATCH | Telangana: Congress leader Renuka Chowdhury holds a Policeman by his collar while being taken away by other Police personnel during the party's protest in Hyderabad over ED summons to Rahul Gandhi. pic.twitter.com/PBqU7769LE
— ANI (@ANI) June 16, 2022
Advertisement
ಕಾಂಗ್ರೆಸ್ ಮುಖಂಡರಾದ ರೇಣುಕಾ ಚೌಧರಿ ಅವರು ಕರ್ತವ್ಯದಲ್ಲಿದ್ದ ತೆಲಂಗಾಣ ಪೊಲೀಸ್ ಅಧಿಕಾರಿಯೊಬ್ಬರ ಕೊರಳ ಪಟ್ಟಿ ಹಿಡಿದು ಎಳೆದಾಡಿದ್ದಾರೆ. ಅಲ್ಲದೆ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೂ ತನ್ನ ದರ್ಪ ಮೆರೆದಿದ್ದಾರೆ. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮೆಟ್ರೋ ಸಂಚಾರ ರಾತ್ರಿ 1.30ರ ವರೆಗೂ ವಿಸ್ತರಣೆ – ಯಾಕೆ ಗೊತ್ತೇ?
Advertisement
Advertisement
ರೇಣುಕಾ ಚೌಧರಿ ವಿರುದ್ಧ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಂದು ರಾಜಭವನ ಚಲೋ ಪ್ರಾರಂಭಿಸಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮಾಂದಾಗಿದ್ದು, ಹಲವೆಡೆ ಹೈಡ್ರಾಮಾ ಸೃಷ್ಟಿಸಿದೆ. ಇದನ್ನೂ ಓದಿ: ಸೋನಿಯಾ ಗಾಂಧಿಗೆ ಮನೆ ಬೇಕಿದ್ರೆ ಇಂದೇ ಅರ್ಜಿ ಸಲ್ಲಿಸಿ: ಡಿಕೆಶಿಗೆ ಬಿಜೆಪಿ ಟಾಂಗ್