ಕಲಬುರಗಿ: ಶಾಸಕ ಬಿ.ಆರ್ ಪಾಟೀಲ್ (BR Patil) ಆಪ್ತರೂ ಆಗಿರುವ ಕಾಂಗ್ರೆಸ್ ಮುಖಂಡ (Congress Leader) ಬಸವರಾಜ್ ಚೌಲ್ ಪುತ್ರನನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಆಳಂದ (Aland) ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡನ ಪುತ್ರ ಚಂದ್ರಶೇಖರ್ ಚೌಲ್ (21) ಹತ್ಯೆಗೀಡಾಗಿದ್ದಾನೆ. ಇದನ್ನೂ ಓದಿ: ಈಗಲೂ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇವೆ, ನಮ್ಮ ದುಃಖ ಯಾರಿಗೆ ಹೇಳೋಣ? – ನಿಲ್ಲದ ಕುಸ್ತಿಪಟುಗಳ ವೇದನೆ
ಚಂದ್ರಶೇಖರ್ ಚೌಲ್ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಇದನ್ನೂ ಓದಿ: ಟೆಕ್ವಾಂಡೋ: ರಾಷ್ಟ್ರಮಟ್ಟಕ್ಕೆ ಕಾಸರಗೋಡಿನ ಗಣ್ಯ – ಕೇರಳದಲ್ಲಿ ಅಗ್ರʻಗಣ್ಯʼಚಿನ್ನದ ಪದಕ..!
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಆಳಂದ ಪಟ್ಟಣದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಕೇಶವ್ ಮಹಾರಾಜ್ ಎಂಟ್ರಿಗೆ `ರಾಮ್ ಸಿಯಾ ರಾಮ್’ ಹಾಡು – ಕ್ರಿಕೆಟ್ ಅಂಗಳದಲ್ಲಿ ಮತ್ತೆ ಶ್ರೀರಾಮನ ಸದ್ದು