ನವದೆಹಲಿ: ಭಾರತ (India) – ಚೀನಾ (China) ಗಡಿ ಸಮಸ್ಯೆಯ ಕುರಿತು ಕೇಂದ್ರ ಸರ್ಕಾರ ಚರ್ಚಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ (Sonia Gandhi) ಸೇರಿದಂತೆ ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್‍ನ ಸಂಸದರು ಬುಧವಾರ ಸದನದಿಂದ (Parliament) ಹೊರನಡೆದರು.
ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ತಕ್ಷಣ ಭಾರತ- ಚೀನಾ ಗಡಿ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌದರಿ ಒತ್ತಾಯಿಸಿದರು. ಅಷ್ಟೇ ಅಲ್ಲದೇ 1962ರಲ್ಲಿ ಚೀನಾ ಯುದ್ಧ ನಡೆಯುವಾಗ ಅಂದಿನ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಅವರು ಲೋಕಸಭೆಯಲ್ಲಿ ಭಾರತದ ಬಗ್ಗೆ ಚರ್ಚಿಸಲು ಅವಕಾಶ ನೀಡಿದ್ದರು. ಅಂದು ನೆಹರು ಅವರು 165 ಸಂಸದರಿಗೆ ಈ ಬಗ್ಗೆ ಮಾತನಾಡಲು ಅವಕಾಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಾವು ಭಾರತ – ಚೀನಾ ಗಡಿ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದರು.
Advertisement
Advertisement
ಕಾಂಗ್ರೆಸ್ ನಾಯಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ವ್ಯವಹಾರ ಸಲಹಾ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಸಭಾಧ್ಯಕ್ಷರು ವಿಷಯವನ್ನು ಮುಂದಕ್ಕೆ ಹಾಕಿದ್ದಕ್ಕೆ ಕಾಂಗ್ರೆಸ್ ಮತ್ತು ಟಿಎಂಸಿ ಪ್ರತಿಭಟಿಸಿ ಸದನದಿಂದ ಹೊರನಡೆದಿದ್ದಾರೆ. ಇದನ್ನೂ ಓದಿ: ದೆಹಲಿ ಏಮ್ಸ್‌ಗೆ ಕನ್ನ ಹಾಕಿದ್ದು ಚೀನಾ – ಡೇಟಾ ಈಗ ಸುರಕ್ಷಿತ
Advertisement
Advertisement
ಟಿಎಂಸಿ ಸದಸ್ಯ ಸುದೀಪ್ ಬಂಡೋಪಾಧ್ಯಾಯ ಈ ಬಗ್ಗೆ ಮಾತನಾಡಿ, ಸರ್ಕಾರದ ಧೋರಣೆ ವಿರುದ್ಧ ಪ್ರತಿಭಟಿಸಿ ತಮ್ಮ ಪಕ್ಷದ ಸದಸ್ಯರು ಸಭಾತ್ಯಾಗ ನಡೆಸುತ್ತಿದ್ದಾರೆ ಎಂದು ಹೇಳಿದರು. ಇದಕ್ಕೂ ಮುನ್ನ ವಿವಿಧ ವಿಷಯಗಳ ವಿರುದ್ಧ ಪ್ರತಿಪಕ್ಷಗಳ ಸದಸ್ಯರು ಲೋಕಸಭೆಯಿಂದ ಹೊರನಡೆದಿದ್ದರು. ಇದನ್ನೂ ಓದಿ: ನಮ್ಮ ನೆಲ, ಜಲ, ಗಡಿ ವಿಚಾರ ಮುಖ್ಯ – ಬೊಮ್ಮಾಯಿ