ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿ ಸೋಂಕು ತಗುಲಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡರಾದ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಹಿನ್ನೆಲೆಯಲ್ಲಿ ಐಸೋಲೇಶನ್‌ಗೆ ಒಳಗಾಗಿದ್ದಾರೆ. ಜೊತೆಗೆ ಸರ್ಕಾರ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Advertisement
Congress President Smt.Sonia Gandhi has tested positive for Covid-19 today. She will remain in isolation as per Govt. protocol.
आज कांग्रेस अध्यक्ष श्रीमती सोनिया गांधी का कोविड-19 टेस्ट रिपोर्ट पॉजिटिव आया है। वह सरकार द्वारा जारी प्रोटोकॉल का पालन करते हुए आइसोलेशन में रहेंगी।
— Jairam Ramesh (@Jairam_Ramesh) August 13, 2022
Advertisement
ಈ ಹಿಂದೆ ಸೋನಿಯಾ ಗಾಂಧಿಗೆ ಜೂ.8ರಂದು ಕೊರೊನಾ ಸೋಂಕು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಅಷ್ಟೇ ಅಲ್ಲದೇ ಆಸ್ಪತ್ರೆಗೂ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಆ ಸಂದರ್ಭದಲ್ಲಿ ಇಡಿ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಸಮಯವನ್ನು ಕೋರಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಜೊತೆಗೆ ಇಡಿ ವಿಚಾರಣೆಯಲ್ಲೂ ಭಾಗಿ ಆಗಿದ್ದರು. ಇದನ್ನೂ ಓದಿ: ಮಡಿಕೇರಿಗೆ ತೆರಳುತ್ತಿದ್ದ KSRTC ಬಸ್ ಅಪಘಾತ – ಜನರ ರಕ್ಷಣೆಗೆ ಮುಂದಾದ ಅಪ್ಪಚ್ಚು ರಂಜನ್
Advertisement
Advertisement
ಈ ವಾರದ ಆರಂಭದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೊರೊನಾ ಸೋಂಕು ದೃಢವಾಗಿತ್ತು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿಗೆ ಕೊರೊನಾ – ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಪಾಸಿಟಿವ್