ಹೈದರಾಬಾದ್: ತೆಲಂಗಾಣದ ಕರೀಂನಗರದಲ್ಲಿ ಕತ್ತೆ ಕದ್ದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿದ್ದಾರೆ. ಕುತೂಹಲಕಾರಿಯಾಗಿ ವಿಚಾರವೆಂದರೆ ಇತ್ತೀಚೆಗೆ ಕೆಸಿಆರ್ ವಿರುದ್ಧದ ನಡೆಸಿದ ಸಣ್ಣ ಪ್ರತಿಭಟನೆಯಲ್ಲಿ ಈ ಕತ್ತೆಯನ್ನೇ ಬಳಸಲಾಗಿದೆ ಎಂದು ಆರೋಪಿಸಲಾಗಿದೆ.
Advertisement
ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಜನ್ಮದಿನದಂದು ಕತ್ತೆ ಜೊತೆ ಪ್ರತಿಭಟನೆ ನಡೆಸಿದ ತೆಲಂಗಾಣ ಎನ್‍ಎಸ್‍ಯುಐ ಅಧ್ಯಕ್ಷ ವೆಂಕಟ್ ಬಲ್ಮೂರ್ ಅವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
Advertisement
ಈ ಸಂಬಂಧ ಶುಕ್ರವಾರ ಕರೀಂನಗರದ ಜಮ್ಮುಕುಂಟಾ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ದಾಖಲಾಗಿದ್ದು, ಇನ್ನೂ 6 ಮಂದಿಯ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅವರೆಲ್ಲರೂ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಕುಟುಂಬ ಮಣಿಪುರವನ್ನು ಎಟಿಎಂ ಆಗಿ ಬಳಸಿದೆ: ಸ್ಮೃತಿ ಇರಾನಿ
Advertisement
ಇದೀಗ ಪೊಲೀಸರು ಕಾನೂನುಬಾಹಿರ ಸಭೆ, ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ, ಕಳ್ಳತನ ಮತ್ತು ಪ್ರಾಣಿಗಳ ಮೇಲೆ ಕ್ರೌರ್ಯ ತೋರಿದ ಆರೋಪದಡಿ 7 ಮಂದಿಯ ಮೇಲೆ . ಭಾರತೀಯ ದಂಡ ಸಂಹಿತೆ (IPಅ) ಸೆಕ್ಷನ್ 143, 153, 504, 379 ರ ಅಡಿಯಲ್ಲಿ 149, ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ.
>For ruining the lives of farmers, students and unemployed youth.
>For false promises, fake propaganda#HappyBirthdayKCR #TelanganaDrohiDiwas @INCTelangana @revanth_anumula @manickamtagore @PonnamLoksabha pic.twitter.com/Jz6vfPi3Hr
— Venkat Balmoor (@VenkatBalmoor) February 17, 2022
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳ ಕೊರತೆಯ ವಿರುದ್ಧ ವೆಂಕಟ್ ಬಲ್ಮೂರ್ ಮತ್ತು ಇತರ ಆರೋಪಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕತ್ತೆಯ ಮೇಲೆ ಕೆಸಿಆರ್ ಫೋಟೋವನ್ನು ಹಾಕಿ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ – ಅಂಜುಮನ್ ಸಂಸ್ಥೆಯಿಂದ ಮನವಿ