ಬೆಂಗಳೂರು: ರಾಜ್ಯದ ಪ್ರಭಾವಿ ಸಚಿವರೊಬ್ಬರು ಹನಿಟ್ರ್ಯಾಪ್ ಖೆಡ್ಡಾದಲ್ಲಿ ಸಿಲುಕಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದ ಪಡಸಾಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ.
ತುಮಕೂರು ಭಾಗದ ಸಚಿವರನ್ನ ಮಟ್ಟ ಹಾಕಲು ಮತ್ತೊಬ್ಬ ಪ್ರಭಾವಿ ನಾಯಕರೊಬ್ಬರು, ಹನಿಟ್ರ್ಯಾಪ್ ಬಲೆಗೆ ಬೀಳಿಸಿರುವ ಆರೋಪ ಕೇಳಿ ಬಂದಿದೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.
- Advertisement 2-
ಸುಸಂಸ್ಕೃತ ರಾಜ್ಯಕ್ಕೆ ಸಿಡಿ ಯೂನಿಟ್‌ನಿಂದ ಕೆಟ್ಟ ಹೆಸರು ಬಂದಿದೆ. ಸಿಡಿ ರಾಜಕಾರಣ ಮಾಡೋರಿಗೆ ಛೀಮಾರಿ ಹಾಕಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅಕ್ರೋಶ ಹೊರಹಾಕಿದ್ದಾರೆ.
- Advertisement 3-
ದುರ್ದೈವ ಇದು ಕೆಲವರಿಗೆ ಉದ್ಯೋಗ ಆಗಿದೆ. ಇದು ಸರಿ ಅಲ್ಲ ಎಂದು ಸಚಿವ ಆರ್‌ಬಿ ತಿಮ್ಮಾಪುರ ಬೇಸರಿಸಿಕೊಂಡಿದ್ದಾರೆ. ಹನಿಟ್ರ್ಯಾಪ್ ಮಾಡೋರಿಗೆ ಕ್ಷಮೆ ಇಲ್ಲ ಎಂದು ಸಚಿವ ಬೈರತಿ ಸುರೇಶ್ ಎಚ್ಚರಿಸಿದ್ದಾರೆ.