ಬೆಂಗಳೂರು: ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ ಪಕ್ಷಾಂತರವೋ ಎಂದು ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಕುಟುಕಿದೆ.
ಟ್ವೀಟ್‍ನಲ್ಲಿ ಏನಿದೆ?: ನಿಮ್ಮ ಆಪ್ತ ವಲಯದಲ್ಲಿರುವ ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ. ಸಿದ್ದರಾಮಯ್ಯನವರೇ ನಿಮ್ಮ ಆಪ್ತರು ಆಪ್ ಹಾಗೂ ಸಮಾಜವಾದಿ ಪಕ್ಷದ ನಾಯಕರ ಭೇಟಿ ಮಾಡಿರುವುದು ಆಕಸ್ಮಿಕ ಘಟನೆಯಾಗಿರಲು ಸಾಧ್ಯವಿಲ್ಲ. ಇದೊಂದು ವ್ಯವಸ್ಥಿತ ನಡೆ. ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶದ ಬಳಿಕ ಕರ್ನಾಟಕದಲ್ಲೂ ಇದರ ಪ್ರತಿಫಲನ ಕಾಣಬಹುದೇ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ
Advertisement
ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ? ಪಕ್ಷಾಂತರವೋ?
ನಿಮ್ಮ ಆಪ್ತ ವಲಯದಲ್ಲಿರುವ ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ.#ವಲಸೆರಾಮಯ್ಯ
— BJP Karnataka (@BJP4Karnataka) January 27, 2022
Advertisement
ನಮ್ಮ ಸಂಪರ್ಕದಲ್ಲಿ ಆ ಪಕ್ಷದವರು ಇದ್ದಾರೆ. ಈ ಪಕ್ಷದವರು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಕಳೆದ ಕೆಲ ದಿನಗಳಿಂದ ನಿರಂತರ ಬುರುಡೆ ಬಿಟ್ಟಾಗಲೇ ಅನುಮಾನವಿತ್ತು. ಈಗ ನೋಡಿದರೆ ತಮ್ಮ ಆಪ್ತರನ್ನೇ ಬೇರೆಯವರ ಸಂಪರ್ಕಕ್ಕೆ ಬಿಟ್ಟಿದ್ದಾರೆ. ಸಿದ್ದರಾಮಯ್ಯನವರೇ, ಮತ್ತೊಮ್ಮೆ ವಲಸೆಗೆ ವೇದಿಕೆ ಸೃಷ್ಟಿಸಿಕೊಳ್ಳುತ್ತಿದ್ದೀರಾ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮುಗಿದ ಅಧ್ಯಾಯ – ಕಾಂಗ್ರೆಸ್‍ಗೆ ಸಿಎಂ ಇಬ್ರಾಹಿಂ ಗುಡ್‍ಬೈ