ರಾಮನಗರ/ ವಿಜಯಪುರ: ಕರ್ನಾಟಕ ವಿಧಾನಸಭೆಗೆ ಚುನಾವಣೆ (Karnataka Assembly Election) ಮುಗಿದ ಬೆನ್ನಲ್ಲೇ ಕಾಂಗ್ರೆಸ್ (Congress) ನಾಯಕರಾದ ಡಿ.ಕೆ ಶಿವಕುಮಾರ್ (DK Shivakumar) ಹಾಗೂ ಎಂ.ಬಿ ಪಾಟೀಲ್ (MB Patil) ರಿಲ್ಯಾಕ್ಸ್ ಮೂಡ್‍ಗೆ ಜಾರಿದ್ದಾರೆ.
ವಿಧಾನಸಭೆ ಮತದಾನಕ್ಕೆ ಬುಧವಾರ ತೆರೆ ಬಿದ್ದಿದೆ. ಮತದಾನದ ಮುಕ್ತಾಯದ ಬಳಿಕ ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸ್ಥಳೀಯ ಮುಖಂಡರ ಜೊತೆ ಕನಕಪುರದ ಕೆ.ಎನ್.ಎಸ್. ವೃತ್ತದ ವಾಸು ಹೋಟೆಲ್‍ಗೆ ತೆರಳಿ ಇಡ್ಲಿ ಸವಿದರು. ಅದಾದ ಬಳಿಕ ಚುನಾವಣೆ ಬಗ್ಗೆ ಸ್ಥಳೀಯರ ಜೊತೆ ಮಾತುಕತೆ ನಡೆಸಿ ಕಾಲ ಕಳೆದಿದ್ದಾರೆ. ಅದಾದ ಬಳಿಕ ಕನಕಪುರದ ಕೋಡಿಹಳ್ಳಿಯ ನಿವಾಸಕ್ಕೆ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಭೇಟಿ ನೀಡಿ ತಾಯಿ ಗೌರಮ್ಮನವರ ಆಶೀರ್ವಾದ ಪಡೆದಿದ್ದಾರೆ.
ಅದೇ ರೀತಿ ತಿಂಗಳಿಂದ ಗಡಿ ಬಿಡಿಯಲ್ಲಿ ಮತಕ್ಷೇತ್ರ ಮತ್ತು ರಾಜ್ಯ ಸುತ್ತಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಇಂದು ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಚುನಾವಣಾ ಭರಾಟೆ ಹಾಗೂ ಮತದಾನದ ಬಳಿಕ ಮನೆಯಲ್ಲಿ ವಿಶ್ರಾಂತಿ ಎಂಬಿಪಿ ಮೊರೆ ಹೋಗಿದ್ದಾರೆ. ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆ ಪತ್ನಿ ಆಶಾ ಪಾಟೀಲ್ ಜೊತೆಗೆ ಕಾಫಿ ಕುಡಿದು ರಿಲ್ಯಾಕ್ಸ್‌ನಲ್ಲಿದ್ದಾರೆ. ಇದನ್ನೂ ಓದಿ: ಇಮ್ರಾನ್ ಖಾನ್ ಬೆನ್ನಲ್ಲೇ ಪಾಕ್ ವಿದೇಶಾಂಗ ಮಾಜಿ ಸಚಿವ ಅರೆಸ್ಟ್ – ಅಜ್ಞಾತ ಸ್ಥಳಕ್ಕೆ ಶಿಫ್ಟ್
ಕಾರ್ಯಕರ್ತರ ದಂಡು ಮನೆಯತ್ತ ಬರುತ್ತಿದ್ದು, ಮತದಾನ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ವೇಳೆ ಮಾತನಾಡಿದ ಎಂಬಿಪಿ ರಾತ್ರಿ ತಡವಾಗಿ ಮಲಗಿದ್ದೆ,ನಮ್ಮಲ್ಲಿ ನಾಟಕ ಕಂಪನಿ ಪಾತ್ರ ಮುಂದುವರಿದಿದೆ ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಇನ್ನು ನಮ್ಮ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಒಳ್ಳೆ ಲೀಡ್‍ನಲ್ಲಿ ಆಯ್ಕೆಯಾಗುವೆ. ದೊಡ್ಡ ಅಂತರದಿಂದ ಗೆಲ್ಲುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಂಜಾಬ್ ಸ್ಫೋಟ ಪ್ರಕರಣ – ಐವರು ಆರೋಪಿಗಳ ಬಂಧನ