ಕೋಲಾರ: ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಆಯೋಜನೆ ಮಾಡಲಾಗಿದ್ದ ಕಾಂಗ್ರೆಸ್ ನಡಿಗೆ ವಿಜಯದ ಕಡೆಗೆ ಸಮಾವೇಶದ ಕಾರ್ಯಕ್ರಮಕ್ಕೆ ಆಗಮಿಸಿದ ಕಾರ್ಯಕರ್ತರಿಗೆ ಕೈ ನಾಯಕರು ಹಣ ಹಂಚಿಕೆ ಮಾಡಿದ್ದಾರೆ.
ಸಮಾವೇಶಕ್ಕೆ ಬಂದಿದ್ದ ಕಾರ್ಯಕರ್ತರಿಗೆ ತಲಾ 500 ರೂಪಾಯಿ ಹಣ ಹಂಚಿಕೆ ಮಾಡುತ್ತಿರುವ ಸ್ಥಳೀಯ ಕಾಂಗ್ರೆಸ್ ನಾಯಕರ ವಿಡಿಯೋ ಸೆರೆಯಾಗಿದೆ.
Advertisement
ಸಿಎಂ ಸಿದ್ದರಾಮಯ್ಯ ಸರ್ಕಾರ ಪರ ಸಾಧನೆಗಳನ್ನು ಜನರಿಗೆ ತಿಳಿಸಲು ಸಾಧನಾ ಯಾತ್ರೆ ಕೈಗೊಂಡಿದ್ದಾರೆ. ಪಕ್ಷದ ಪರವಾಗಿ ಕಾಂಗ್ರೆಸ್ ಸೋತಿರುವ ಕ್ಷೇತ್ರಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರು ಪ್ರವಾಸ ಕೈಗೊಂಡಿದ್ದಾರೆ.
Advertisement
ಕುರುಡುಮಲೆ ವಿನಾಯಕನಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ರಾಜ್ಯ ನೀರಾವರಿ ಯೋಜನೆ ನಿಜವಾಗಲೂ ಸಮಸ್ಯೆ ಬಗೆಹರಿಸಿದರೆ ನಮ್ಮದು ಏನು ಅಭ್ಯಂತರವಿಲ್ಲ. ಆದರೆ ರಾಜಕೀಯ ದುರುದ್ದೇಶದಿಂದ ಬಿಜೆಪಿ ಮಹದಾಯಿ ವಿಚಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮಹದಾಯಿ ವಿಚಾರದಲ್ಲಿ ಅನೇಕ ಹೋರಾಟ, ಬಂದ್ ಗಳನ್ನು ಮಾಡಿದರೂ ಮಧ್ಯಪ್ರವೇಶಿಸದೆ, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಟಕವಾಡುತ್ತಿದೆ ಎಂದು ಆರೋಪಿಸಿದರು.
Advertisement
Advertisement
ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ: ಮುಂದಿನ ಕಾರ್ಯಕ್ರಮಗಳಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ ಅವರು, ಪಕ್ಷದಲ್ಲಿ ನನ್ನನ್ನು ಯಾರು ಕಡೆಗಣಿಸುತ್ತಿಲ್ಲ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.
ಕಾಂಗ್ರೆಸ್ ನಡಿಗೆ ವಿಜಯದ ಕಡೆಗೆ: ಎರಡನೇ ಹಂತದ ಪ್ರಚಾರವಾಗಿ ಕಾಂಗ್ರೆಸ್ ನಡಿಗೆ ವಿಜಯದ ಕಡೆಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸರ್ಕಾರದ ನಾಲ್ಕೂವರೆ ವರ್ಷದ ಸಾಧನೆ ಮುಂದಿಟ್ಟುಕೊಂಡು 2018 ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆ ಇಲ್ಲ: ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ, ಇಂಧನ ಸಚಿವ ಡಿಕೆ ಶಿವಕುಮಾರ್, ಪಕ್ಷದಲ್ಲಿ ವ್ಯಕ್ತಿ ಪೂಜೆ ನಡೆಯುವುದಿಲ್ಲ, ಪಕ್ಷ ಪೂಜೆ ನಡೆಯಲಿದೆ. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯವಾಗಿ ಚುನಾವಣೆ ಎದುರಿಸಿ ತನ್ನ ಕಾಲ ಮೇಲೆ ನಿಲ್ಲಲಿದೆ. ರಾಮನಗರದಲ್ಲೂ ಸಹ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಗುಜರಾತ್ ರಾಜ್ಯದಲ್ಲಿ ಬಿಜೆಪಿ ಪಕ್ಷ ಎಷ್ಟೇ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡರೂ ಸಹ ಕಾಂಗ್ರೆಸ್ ಪಕ್ಷ ಸುಮಾರು 80 ಸ್ಥಾನಗಳನ್ನು ಗೆದ್ದಿರುವುದು ಸಂತೋಷದ ವಿಷಯವಾಗಿದ್ದು, ಅಲ್ಲಿನ ಮತದಾರರಿಗೆ ಕಾಂಗ್ರೆಸ್ ಪಕ್ಷ ಚಿರಋಣಿಯಾಗಿದೆ ಎಂದರು.
https://www.youtube.com/watch?v=R7u7aIQlbTE&feature=youtu.be