– ಶಾಸಕರನ್ನು ಸಂಪರ್ಕಿಸಲು ಕೈ ನಾಯಕರು ಹೈರಾಣು!
ಕಲಬುರಗಿ: ಕಾಂಗ್ರೆಸ್‍ನ ಅತೃಪ್ತ ಶಾಸಕರ ಪಟ್ಟಿಯಲ್ಲಿರುವ ಉಮೇಶ್ ಜಾಧವ್ ಅವರಿಗೆ ಪಕ್ಷ ಬಿಡದಂತೆ ಕೈ ನಾಯಕರು ಕರೆ ಮಾಡಿದ್ದಾರೆ. ಆದರೆ ಮೊಬೈಲ್ ಶಾಸಕರ ಸಹೋದರ ಬಳಿ ಇದಿದ್ದರಿಂದ ಸಂಪರ್ಕ ಸಾಧ್ಯವಾಗಿಲ್ಲ.
ಮಾಜಿ ಸಿಎಂ ಸಿದ್ದರಾಮಯ್ಯ, ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಧ್ಯಕ್ಷ ಈಶ್ವರ ಖಂಡ್ರೆ, ಗೃಹ ಸಚಿವ ಎಂ.ಬಿಪಾಟೀಲ್ ಅವರು ಶಾಸಕ ಉಮೇಶ್ ಜಾಧವ್ ಸಂಪರ್ಕಕ್ಕೆ ಯತ್ನಿಸಿ ಹೈರಾಣ ಆಗಿದ್ದಾರೆ.
Advertisement
Advertisement
ಈ ಮೂಲಕ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಸೇರಿದಂತೆ, ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ, ಗೋಕಾಕ್ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಮಹೇಶ್ ಕಮಟಳ್ಳಿ ಸಿಎಲ್‍ಪಿ ಸಭೆಗೆ ಗೈರು ಆಗಿದ್ದಾರೆ. ಇತ್ತ ಸಭೆಗೆ ಹಾಜರಾಗಿದ್ದ ಶಾಸಕರನ್ನು ಕೈ ನಾಯಕರು ರೆಸಾರ್ಟ್ ಗೆ ಶಿಫ್ಟ್ ಮಾಡಿದ್ದಾರೆ.
Advertisement
ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯರಿಗೆ ಪತ್ರವೊಂದನ್ನು ರವಾನಿಸಿರುವ ಉಮೇಶ್ ಜಾಧವ್, ಅನಾರೋಗ್ಯ ಹಿನ್ನೆಲೆಯಲ್ಲಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ತಿಳಿಸಿದ್ದಾರೆ. ಪತ್ರವನ್ನು ಮಾಧ್ಯಮಗಳಿಗೆ ತೋರಿಸಿದ ಸಿದ್ದರಾಮಯ್ಯನವರು ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಉಳಿದಂತೆ ಗೈರಾದವರಿಗೆ ನೋಟಿಸ್ ಕಳುಹಿಸಲಾಗುತ್ತದೆ. ಮುನ್ನೆಚ್ಚರಿಕೆಯಾಗಿ ಎಲ್ಲರನ್ನು ಕರೆದುಕೊಂಡು ಬಿಡದಿಯ ಈಗಲ್ ಟನ್ ರೆಸಾರ್ಟ್ ಗೆ ತೆರಳಿ ಸಭೆ ನಡೆಸಲಿದ್ದೇವೆ ಎಂಬುದನ್ನು ಸ್ಪಷ್ಟಪಡಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv