ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬಗ್ಗೆ ಸಿಎಂಗೆ ದೂರು ಹೇಳಿದ ಕಾಂಗ್ರೆಸ್ ನಾಯಕರು

Public TV
2 Min Read
hsn dc transfer 1

ಹಾಸನ: ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಹಾಸನ ಭೇಟಿ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್‍ನ ಕೆಲ ನಾಯಕರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡಿದೆ.

rohini sindhuri 4

ಹೌದು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು ಪಡೆದುಕೊಂಡಿರುವವರು. ಮಂಡ್ಯ ಜಿಲ್ಲೆಯ ಸಿಐಓ ಆಗಿದ್ದ ರೋಹಿಣಿ ಕಳೆದ 2017ರ ಜುಲೈ 14ರಿಂದ ಹಾಸನದ ಜಿಲ್ಲಾಧಿಕಾರಿಯಾಗಿದ್ದಾರೆ. ಅಂದ್ರೆ ನಾಲ್ಕು ತಿಂಗಳಿನಿಂದ ಹಾಸನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದಾರೆ. ತಮ್ಮ ಕೆಲಸದಿಂದಾಗಿ ಈಗಾಗಲೇ ರಾಜ್ಯದ ಮುಖ್ಯಮಂತ್ರಿಯಿಂದಲೇ ಪ್ರಶಸ್ತಿಯನ್ನು ಪಡೆದಿದ್ದಾರೆ. ಶ್ರವಣಬೆಳಗೋಳ ಮಹಾಮಸ್ತಕಾಭಿಷೇಕ ಸೇರಿದಂತೆ ಹಾಸನದ ಹಲವು ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಕ್ರಿಯಾಶೀಲರಾಗಿದ್ದಾರೆ. ಆದ್ರೆ ಇತ್ತೀಚೆಗೆ ಹಾಸನ ಜಿಲ್ಲೆಗೆ ಮುಖ್ಯಮಂತ್ರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಜಿಲ್ಲಾಧಿಕಾರಿ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

hsn dc 8

ಜನವರಿ 4ರಂದು ಹಾಸನದ ಮೂರು ಕಡೆ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ ಸಿಎಂ ಅಂದು ರಾತ್ರಿ ನಗರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಸಿಎಂ ರನ್ನು ಭೇಟಿ ಮಾಡಿದ ಹಲವು ನಾಯಕರು, ಜಿಲ್ಲಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಉಸ್ತುವಾರಿ ಸಚಿವರಾದ ಎ.ಮಂಜು, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಸೇರಿದಂತೆ ಹಲವು ನಾಯಕರು ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಗುಸುಗುಸು ಕೇಳಿಬರುತ್ತಿದೆ.

hsn dc 6

ಆದ್ರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕರು, ನಾವು ವರ್ಗಾವಣೆಗೆ ಆಗ್ರಹಿಸಿಲ್ಲ. ಬದಲಾಗಿ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅದನ್ನು ಸರಿಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿರುವುದು ನಿಜ ಎಂದಿದ್ದಾರೆ.

hsn dc 2

ಡಿಸಿ ಪರ ಬ್ಯಾಟಿಂಗ್ ಮಾಡುತ್ತಿರುವ ಜಿಲ್ಲೆಯ ಜೆಡಿಎಸ್ ನಾಯಕರು, ಮಸ್ತಕಾಭಿಷೇಕ ಕಾಮಗಾರಿಗಳಲ್ಲಿ ಹಣ ಗುಳುಂ ಮಾಡಲು ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

hsn dc 1

ಯಾರು ರೋಹಿಣಿ ಸಿಂಧೂರಿ?: ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ -ಆಸ್ತಿ ಅಪ್ಲಿಕೇಷನ್ ತಂದಿದ್ದರು. ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.

hsn dc 4

ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.

hsn dc 7

2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯಕ್ಕೆ ಸಿಎಂ ಅಭಿನಂದನೆ

https://www.youtube.com/watch?v=RIlr3y8t7ow

https://www.youtube.com/watch?v=c6PoH0rh1XE

https://www.youtube.com/watch?v=I0pUTEiRfSo

rohini sindhuri 1

rohini sindhuri 2

rohini sindhuri 6

rohini sindhuri 3

rohini sindhuri 5

hsn dc 5

Share This Article
Leave a Comment

Leave a Reply

Your email address will not be published. Required fields are marked *