Dakshina Kannada

ಧರ್ಮಸ್ಥಳದ ಪ್ರಸಾದ ನೀಡಿ ಆಸ್ಕರ್ ಫೆರ್ನಾಂಡಿಸ್ ಚೇತರಿಕೆಗೆ ಪ್ರಾರ್ಥಿಸಿದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

Published

on

Share this

ಮಂಗಳೂರು: ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ವೀರೇಂದ್ರ ಹೆಗ್ಗಡೆ ಅವರು ಆಸ್ಕರ್ ಫೆರ್ನಾಂಡಿಸ್ ಅವರಿಗೆ ಧರ್ಮಸ್ಥಳ ಮಂಜುನಾಥ ದೇವರ ಪ್ರಸಾದವನ್ನು ನೀಡಿ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದರು. ಬಳಿಕ ಕುಟುಂಬ ವರ್ಗದವರು ಮತ್ತು ವೈದ್ಯರೊಂದಿಗೆ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಆಸ್ಕರ್ ಫೆರ್ನಾಂಡಿಸ್ ರವರು ಇಂದಿರಾಗಾಂಧಿ, ರಾಜೀವ್ ಗಾಂಧಿಯವರಿಗೆ ಆಪ್ತರಾಗಿದ್ದರು. ರಾಜ್ಯಕ್ಕೆ ಬಹಳಷ್ಟು ಸೇವೆ ಮಾಡಿದ್ದಾರೆ. ಅವರಿಗೆ ಧರ್ಮಸ್ಥಳ ಮಂಜುನಾಥ ದೇವರ ಪ್ರಸಾದ ಹಾಕಿ, ಶುಭಹಾರೈಸಿ ಬಂದಿದ್ದೇನೆ. ವೈದ್ಯರ ವರದಿ ಪ್ರಕಾರ, ಅವರ ಮೆದುಳು ಇನ್ನೂ ಚುರುಕಾಗಿದೆ. ಪಕ್ಷಾತೀತವಾಗಿ ಕರ್ನಾಟಕ ಹಾಗೂ ತುಳುನಾಡಿನ ಜನತೆ ಅವರ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ ಅವರು ಶೀಘ್ರ ಗುಣಮುಖರಾಗಲಿ ಎಂದು ವೀರೇಂದ್ರ ಹೆಗ್ಗಡೆ ಹಾರೈಸಿದರು. ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

Click to comment

Leave a Reply

Your email address will not be published. Required fields are marked *

Advertisement
Advertisement