Connect with us

Dakshina Kannada

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

Published

on

Share this

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ದಾಖಲಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಅವರ ಆರೋಗ್ಯ ವಿಚಾರಿಸಲು ಮಂಗಳೂರಿಗೆ ಆಗಮಿಸಿದ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಕರ್ ಅವರ ಮನೆಯವರಲ್ಲಿ ಮಾತುಕತೆ ನಡೆಸಿದ್ರು. ಆಸ್ಪತ್ರೆ ಭೇಟಿ ಬಳಿಕ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ ಆಸ್ಕರ್ ಅವರ ಆರೋಗ್ಯ ಹದಗೆಟ್ಟಿಲ್ಲ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ದೆಹಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡೋ ಅಗತ್ಯ ಇಲ್ಲ ಎಂದರು.

ದೇಶದ ವಿವಿಧ ಕಡೆಯಿಂದಲೆ ಮಂಗಳೂರಿನ ಆಸ್ಪತ್ರೆಗೆ ಬರುತ್ತಾರೆ. ಹೀಗಾಗಿ ಇಲ್ಲೇ ಉತ್ತಮ ಚಿಕಿತ್ಸೆ ಪಡೆದು ಅವರು ಶೀಘ್ರ ಗುಣಮುಖರಾಗಿ ಹೊರ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋದಾಗಿ ಹೇಳಿದರು.

ವಲಸಿಗರು ಅಲ್ಲ,ಬಿಜೆಪಿಯ ಶಾಸಕ ಸಚಿವರುಗಳು: ವಲಸೆ ಶಾಸಕರು ಈಗ ಅವರು ವಲಸಿಗರಲ್ಲ, ಅವರು ಬಿಜೆಪಿ ಶಾಸಕರು- ಸಚಿವರುಗಳು, ಅವರಿಗೂ ನಮಗೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಶಾಸಕರು ಮೀಟಿಂಗ್ ಮಾಡಿ, ಯಾರನ್ನ ಭೇಟಿ ಮಾಡಿದ್ರು ಅದಕ್ಕೂ ನಮಗೂ ಸಂಬಧವಿಲ್ಲ. ವಲಸೆ ಶಾಸಕರು ಮರಳಿ ಪಕ್ಷಕ್ಕೆ ಬರುವ ವಿಚಾರದ ಬಗ್ಗೆ ನಾನು ಈಗ ಏನು ಹೇಳಲ್ಲ. ಅದಕ್ಕೆಲ್ಲಾ ಇನ್ನು ಸಮಯವಿದೆ. ಮುಂದೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನಿಮಗೂ ಸಿಗಲಿದೆ ನಾನು ಕೂಡ ಉತ್ತರ ಕೊಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Click to comment

Leave a Reply

Your email address will not be published. Required fields are marked *

Advertisement