ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 4,719 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ಹೊರನಡೆದಿದ್ದಾರೆ.
Advertisement
9 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದೆ. ಕಾಂಗ್ರೆಸ್ ಅಭ್ಯರ್ಥಿ 40785, ಬಿಜೆಪಿ ಅಭ್ಯರ್ಥಿ 36066, ಜೆಡಿಎಸ್ ಅಭ್ಯರ್ಥಿ 432 ಮತಗಳನ್ನು ಗಳಿಸಿದ್ದಾರೆ. ಇದನ್ನೂ ಓದಿ: ಮೊದಲೇ ಪೈಪೋಟಿ ನಿರೀಕ್ಷಿಸಿದ್ದೆವು, ಫಲಿತಾಂಶಕ್ಕೆ ಸಮಯವಿದೆ: ಬೊಮ್ಮಾಯಿ
Advertisement
ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾರೆ. ಸ್ಥಳದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಸಂಭ್ರಮಾಚರಣೆ ಮಾಡದಂತೆ ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ಎಣಿಕಾ ಕೇಂದ್ರದಿಂದ ಪೊಲೀಸರು ಕಳುಹಿಸುತ್ತಿದ್ದಾರೆ. ಆದರೆ ಪೊಲೀಸರ ಮನವಿಗೂ ಜಗ್ಗದ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲೇ ಜಮಾಯಿಸಿದ್ದಾರೆ.
Advertisement
ಶ್ರೀನಿವಾಸ್ ಮಾನೆ ಮುಖವಾಡ ಹಾಕಿಕೊಂಡ ಕಾರ್ಯಕರ್ತರು ಅಭ್ಯರ್ಥಿ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಜೈಕಾರ ಕೂಗಿದರು. ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮತ ಎಣಿಕಾ ಕೇಂದ್ರದಿಂದ ಹೊರನಡೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತವರು ಕ್ಷೇತ್ರದಲ್ಲೇ ಭಾರಿ ಮುಖಭಂಗ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ: 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ
Advertisement
ಅಕ್ಟೋಬರ್ 30 ರಂದು ನಡೆದ ಉಪ ಚುನಾವಣೆಯಲ್ಲಿ ಹಾನಗಲ್‍ನಲ್ಲಿ ಶೇಕಡಾ 83ರಷ್ಟು ಮತದಾನ ನಡೆದಿತ್ತು. ಹಾನಗಲ್‍ನಲ್ಲಿ ಬಿಜೆಪಿಯ ಶಿವರಾಜ್ ಸಜ್ಜನರ್ ಮತ್ತು ಕಾಂಗ್ರೆಸ್‍ನ ಶ್ರೀನಿವಾಸ ಮಾನೆ ನಡುವೆ ನೆಕ್ ಟು ನೆಕ್ ಫೈಟ್ ಕಂಡುಬಂದಿತ್ತು.