ಹೈದರಾಬಾದ್: ನಾಲ್ಕು ರಾಜ್ಯಗಳ ಚುನಾವಣಾ ಮತ ಎಣಿಕೆ (Election Counting) ಬೆಳಗ್ಗೆ 8 ಗಂಟೆಯಿಂದ ಶುರುವಾಗಿದ್ದು, ತೆಲಂಗಾಣ, ಛತ್ತಿಸ್‌ಗಡದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಬೆಳಗ್ಗೆ 9:15ರ ವೇಳೆಗೆ ತೆಲಂಗಾಣದಲ್ಲಿ ಕಾಂಗ್ರೆಸ್ 62, ಬಿಆರ್‌ಎಸ್ 36, ಬಿಜೆಪಿ 3, ಇತರೇ 6 ಸ್ಥಾನಗಳಿದ್ದರೆ, ಛತ್ತಿಸ್‌ಗಡದಲ್ಲಿ ಬಿಜೆಪಿ 30, ಕಾಂಗೆಸ್ 49, ಇತರೇ 1 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ – ಫೈಟ್ ನೀಡುತ್ತಿದೆ ಕಾಂಗ್ರೆಸ್
Advertisement
Advertisement
ತೆಲಂಗಾಣದಲ್ಲಿ 119 ಹಾಗೂ ಛತ್ತಿಸ್‌ಗಡದಲ್ಲಿ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ತೆಲಂಗಾಣದಲ್ಲಿ ಬಹುಮತಕ್ಕೆ 100 ಸ್ಥಾನಗಳು ಹಾಗೂ ಛತ್ತಿಸ್‌ಗಡದಲ್ಲಿ 46 ಸ್ಥಾನಗಳ ಅಗತ್ಯವಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ನರೋತ್ತಮ ಮಿಶ್ರಾ
Advertisement
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಗ್ಯಾರಂಟಿಗಳು ಪ್ರಮುಖ ಪಾತ್ರ ವಹಿಸಿದ್ದವು. ಇದೇ ಗ್ಯಾರಂಟಿ ತಂತ್ರವನ್ನು ತೆಲಂಗಾಣದಲ್ಲಿಯೂ ಅನುಸರಿಸಲಾಗಿತ್ತು. ಕರ್ನಾಟಕದ ಪ್ರಮುಖ ನಾಯಕರು ತೆಲಂಗಾಣದಲ್ಲಿ ಪ್ರಚಾರ ನಡೆಸಿದ್ದರು.
Advertisement
ತೆಲಂಗಾಣದಲ್ಲಿ ಕಾಂಗ್ರೆಸ್‍ನಲ್ಲಿ ಆರು ಗ್ಯಾರಂಟಿ..!
* ಗ್ಯಾರಂಟಿ 1 – ಪ್ರತಿ ತಿಂಗಳು ಅತ್ತೆಗೆ 4,000 ರೂ. – ಸೊಸೆಗೆ 2,500 ರೂ.
* ಗ್ಯಾರಂಟಿ 2 – ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ)
* ಗ್ಯಾರಂಟಿ 3 – ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ
* ಗ್ಯಾರಂಟಿ 4 – 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್
* ಗ್ಯಾರಂಟಿ 5 – ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು
* ಗ್ಯಾರಂಟಿ 6 – ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್
ಎಲ್ಲಿ ಎಷ್ಟು ಮ್ಯಾಜಿಕ್ ನಂಬರ್?
ಮಧ್ಯಪ್ರದೇಶ: ಒಟ್ಟು ಸ್ಥಾನ- 230, ಸರಳ ಬಹುಮತಕ್ಕೆ-116, ರಾಜಸ್ಥಾನ: ಒಟ್ಟು ಸ್ಥಾನ- 199, ಸರಳ ಬಹುಮತಕ್ಕೆ-100, ಛತ್ತೀಸ್ ಗಡ: ಒಟ್ಟು ಸ್ಥಾನ- 90, ಸರಳ ಬಹುಮತಕ್ಕೆ-46, ತೆಲಂಗಾಣ- ಒಟ್ಟು ಸ್ಥಾನ-119, ಸರಳ ಬಹುಮತಕ್ಕೆ-60.