ನವದೆಹಲಿ: ಲೋಕಸಭೆ ಚುನಾವಣೆ (Loksabha Election) ಸನಿಹವಾಗುತ್ತಿರುವ ಬೆನ್ನಲ್ಲೇ ಎರಡನೇ ಹಂತದ ಭಾರತ್ ಜೋಡೊ ಯಾತ್ರೆ (Bharat Jodo yatre) ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ. ಜನವರಿ ಮೊದಲ ವಾರದಿಂದಲೇ ಯಾತ್ರೆ ಆರಂಭವಾಗಬಹುದು ಎಂದು ಮೂಲಗಳು ತಿಳಿಸಿವೆ.
ಪಂಚರಾಜ್ಯಗಳ ಚುನಾವಣೆ ಅಂತ್ಯವಾಗಿ ಸಂಸತ್ ಕಲಾಪವೂ ಮುಗಿದ ಹಿನ್ನಲೆ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಯಾತ್ರೆಗೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಎರಡನೇ ಹಂತದ ಭಾರತ್ ಜೋಡೋ ಯಾತ್ರೆ ಹೈಬ್ರಿಡ್ ಮೋಡ್‍ನಲ್ಲಿರಲಿದೆ, ಯಾತ್ರೆಯಲ್ಲಿ ಭಾಗವಹಿಸುವವರು ಕಾಲ್ನಡಿಗೆಯಲ್ಲಿ ಅಥಾವ ಮತ್ತು ವಾಹನ ಬಳಬಹುದಾಗಿದ್ದು ರಾಹುಲ್‍ಗಾಂಧಿ (Rahul Gandhi) ಮಾತ್ರ ಕಾಲ್ನಡಿಗೆಯಲ್ಲಿ ಯಾತ್ರೆ ಮಾಡಲಿದ್ದಾರೆ ಎನ್ನಲಾಗಿದೆ.
Advertisement
Advertisement
ಈ ಆವೃತ್ತಿಯ ವಿಶೇಷ ಗಮನವು ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದ ಮೇಲೆ ಇರುತ್ತದೆ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಮೊದಲ ಆವೃತ್ತಿಯಂತೆಯೇ ಪ್ರತಿ ದಿನವೂ ಸಾರ್ವಜನಿಕ ಸಭೆಗಳಲ್ಲಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ, ಜನರೊಂದಿಗೆ ಬೆರೆಯಲಿದ್ದಾರೆ. ಡಿಸೆಂಬರ್ 21 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಗುಂಪಿನ ಸಭೆಯಲ್ಲಿ ಉದ್ದೇಶಿತ ಯಾತ್ರೆಯನ್ನು ಚರ್ಚಿಸಿ ಅನುಮೋದಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಉಪರಾಷ್ಟ್ರಪತಿ ಧನ್ಕರ್ ಬಗ್ಗೆ ಅಣಕು ಪ್ರದರ್ಶನ, ಲೇವಡಿ- ನಗುತ್ತಾ ವೀಡಿಯೋ ಮಾಡಿದ ರಾಹುಲ್
Advertisement
ಭಾರತ್ ಜೋಡೋ ಯಾತ್ರೆಯ ಮೊದಲ ಹಂತವು 2022ರ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಜನವರಿ 2023 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಅಂತ್ಯವಾಯಿತು. ಇದು 126 ದಿನಗಳಲ್ಲಿ 12 ರಾಜ್ಯಗಳ 75 ಜಿಲ್ಲೆಗಳ ಮೂಲಕ ಸರಿಸುಮಾರು 4,080 ಕಿಲೋಮೀಟರ್ ದೂರವನ್ನು ಕ್ರಮಿಸಿತು ಇದು ಭಾರತದ ಅತಿ ಉದ್ದದ ಪಾದಯಾತ್ರೆಯನ್ನು ಗುರುತಿಸಲಾಗಿದೆ.