ಬೆಂಗಳೂರು: ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಬೆಂಗಳೂರು (Bengaluru) ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿದೆ.
ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar), ಬಿ.ಕೆ ಹರಿಪ್ರಸಾದ್, ಎಂ.ಬಿ ಪಾಟೀಲ್, ಕೆ.ಹೆಚ್ ಮುನಿಯಪ್ಪ, ಜಿ.ಪರಮೇಶ್ವರ್, ಕೆ.ಜೆ ಜಾರ್ಜ್, ದಿನೇಶ್ ಗುಂಡೂರಾವ್, ಹೆಚ್.ಸಿ ಮಹಾದೇವಪ್ಪ, ಶಾಮನೂರು ಶಿವಶಂಕರಪ್ಪ, ಅಲ್ಲಂ ವೀರಭದ್ರಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
Advertisement
Advertisement
ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಹತ್ವದ ಸಭೆಯನ್ನ ಕೈ ನಾಯಕರು ನಡೆಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳು ಇರುವ ಕಾರಣ ಶಾರ್ಟ್ ಲಿಸ್ಟ್ ಮಾಡಲಿರುವ ಸಭೆ ಇದಾಗಿದ್ದು, ಬಳಿಕ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿ ಸ್ಕ್ರೀನಿಂಗ್ ಕಮಿಟಿಗೆ ನಾಯಕರು ರವಾನಿಸಲಿದ್ದಾರೆ. ಇಂದಿನ ಸಭೆಯಲ್ಲಿ ಅಭ್ಯರ್ಥಿ ಶಾರ್ಟ್ ಲಿಸ್ಟ್ ಸಂಬಂಧ ಮಹತ್ವದ ತೀರ್ಮಾನವಾಗಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳ ಸುರಿಮಳೆ – 7 ಕೇಸ್ ದಾಖಲು
Advertisement
Advertisement
150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಂಬಂಧ ಇಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗುತ್ತದೆ. 100 ಸ್ಥಾನಗಳಿಗೆ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ 50-50 ಫಾರ್ಮುಲಾ ಆದ್ಯತೆ ನೀಡುವ ಸಾಧ್ಯತೆಯಿದೆ. ಉಳಿದ 50 ಸ್ಥಾನಗಳು ಸಾಮೂಹಿಕ ಅಭಿಪ್ರಾಯಕ್ಕೆ ಆದ್ಯತೆ ನೀಡುವ ಸಾಧ್ಯತೆಯು ಇದೆ. ಮೊದಲ 150 ಜನರ ಹೆಸರು ಬಿಡುಗಡೆಗೆ ಇಂದಿನ ಸಭೆ ಮಹತ್ವದ್ದಾಗಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ಆಯ್ಕೆ ಸಂಬಂಧ ಅಂತಿಮ ಫಾರ್ಮುಲಾ ಇಂದೇ ನಿರ್ಧಾರವಾಗಲಿದೆ. ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್‌ವೈ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k