Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭಾ ಚುನಾವಣೆ ಘೋಷಣೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲೋಕಸಭಾ ಚುನಾವಣೆ ಘೋಷಣೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ವಿಜಯೇಂದ್ರ

Bengaluru City

ಲೋಕಸಭಾ ಚುನಾವಣೆ ಘೋಷಣೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ವಿಜಯೇಂದ್ರ

Public TV
Last updated: January 31, 2024 7:57 pm
Public TV
Share
3 Min Read
B.Y Vijayendra
SHARE

– ಗ್ಯಾರಂಟಿ ಬ್ಲಾಕ್‍ಮೇಲ್ ಹೇಳಿಕೆ ವಿವಾದಕ್ಕೆ ಟಾಂಗ್ ಕೊಟ್ಟ ಬಿಜಿಪಿ ರಾಜ್ಯಾಧ್ಯಕ್ಷ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ (2024 Lok Sabha Elections) ಘೋಷಣೆ ಆಗುವ ಮೊದಲೇ ಕಾಂಗ್ರೆಸ್ (Congress) ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ (Chikkamagaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದೆ ಇದ್ದರೆ ಗ್ಯಾರಂಟಿಗಳು ರದ್ದು ಕುರಿತ ಮಾಗಡಿಯ ಕಾಂಗ್ರೆಸ್ ಶಾಸಕರ ಹೇಳಿಕೆಯನ್ನು ಗಮನಿಸಿದ್ದೇನೆ. ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದರು. ಈಗ ವಾಸ್ತವ ಸ್ಥಿತಿ ಅವರಿಗೆ ಅರ್ಥವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಒಗ್ಗೂಡಿ 28ರಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಶಿ ವಿಶ್ವನಾಥನನ್ನ ಬಿಜೆಪಿ ವಿಶ್ವನಾಥ ಎನ್ನಬೇಡಿ: ಕೆ.ಎಸ್ ಈಶ್ವರಪ್ಪ

B.Y Vijayendra 1

ಕಾಂಗ್ರೆಸ್ ಮುಖಂಡರಲ್ಲೂ ತಮ್ಮ ಹೇಳಿಕೆ ಕುರಿತು ಅನುಮಾನ ಶುರುವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ ಚುನಾವಣಾ ಫಲಿತಾಂಶ ಹಾಗೂ ಬಿಜೆಪಿ ಗೆಲುವು, ಮತ್ತೊಂದು ಕಡೆ ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಆದ ನಂತರ ಇಡೀ ದೇಶದಲ್ಲಿ, ಕರ್ನಾಟಕ ರಾಜ್ಯದಲ್ಲೂ ಸಹ ನಿರ್ಮಾಣವಾದ ವಾತಾವರಣದಿಂದ ಕಾಂಗ್ರೆಸ್ಸಿಗರು ಭಯಭೀತರಾಗಿದ್ದಾರೆ ಎಂದು ಹೇಳಿದ್ದಾರೆ.

B.Y Vijayendra 2

ಕಾಂಗ್ರೆಸ್ ಪಕ್ಷದವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬೋಗಸ್ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದಿದ್ದರು. ಮುಂದಿನ ಲೋಕಸಭಾ ಚುನಾವಣೆಯ ಸೋಲನ್ನು ಈಗಾಗಲೇ ಕಾಂಗ್ರೆಸ್ ಮುಖಂಡರು ಒಪ್ಪಿಕೊಳ್ಳುತ್ತಿದ್ದಾರೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್, ರಾಜ್ಯದ ಜನರಿಗೆ ಅನ್ಯಾಯ ಮಾಡಲು ಬಿಜೆಪಿ ಬಿಡುವುದಿಲ್ಲ. ಇವರ ಕಿವಿ ಹಿಂಡಿ ಕೆಲಸ ಮಾಡಿಸುವ ಶಕ್ತಿ ನಮಗಿದೆ. ಅದನ್ನು ವಿರೋಧ ಪಕ್ಷವಾಗಿ ನಾವು ಮಾಡುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.

ಇದು ಬ್ಲ್ಯಾಕ್‍ಮೇಲ್ ಅಲ್ಲದೇ ಇನ್ನೇನ್ರಿ? ಕಾಂಗ್ರೆಸ್ ಪಕ್ಷದವರಿಗೆ ನಾಚಿಕೆ ಆಗಬೇಕು. ಸರ್ಕಾರ ಬಂದು 8 ತಿಂಗಳಾದರೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇವರು ಒಂದೂ ಯೋಜನೆ ಕೊಟ್ಟಿಲ್ಲ. ಇವರ ಗ್ಯಾರಂಟಿ ವಿರುದ್ಧ ರಾಜ್ಯದ ಜನರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಇವತ್ತು ಬಸ್ ವ್ಯವಸ್ಥೆ ಇಲ್ಲ. ಬರಗಾಲದ ಸಂದರ್ಭದಲ್ಲಿ ರೈತರು ಇವತ್ತು ಅವರ ಪಂಪ್‍ಸೆಟ್‍ಗಳಿಗೆ ತ್ರಿಫೇಸ್ ವಿದ್ಯುತ್ ಕೊಡಲು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಇವರು ಯಾವ ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ? ಇವರ ಗ್ಯಾರಂಟಿ ಬಗ್ಗೆ ಜನರು ಈಗಾಗಲೇ ವಿಶ್ವಾಸ ಕಳೆದುಕೊಂಡಿದ್ದಾರೆ. ಮತ್ತೊಂದು ಕಡೆ ಗ್ಯಾರಂಟಿ ಆಧಾರದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು, ಈಗಾಗಲೇ ಸೋಲನ್ನು ಒಪ್ಪಿಕೊಳ್ಳುತ್ತಿದೆ. ಅಲ್ಲದೆ, ಬ್ಲ್ಯಾಕ್‍ಮೇಲ್ ತಂತ್ರವನ್ನೂ ಅನುಸರಿಸಲು ಹೊರಟಿದ್ದಾರೆ. ಇದನ್ನು ನೋಡಿ ಬಿಜೆಪಿ ಕಣ್ಮುಚ್ಚಿಕೊಂಡು ಕೂರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮಂಡ್ಯದ ಘಟನೆಯನ್ನು ಬಿಜೆಪಿ- ಜೆಡಿಎಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ತೆಗೆದುಕೊಂಡ ತೀರ್ಮಾನ, ಅಲ್ಲಿ ಧ್ವಜಸ್ತಂಭ ನಿರ್ಮಿಸಿದ್ದೇ ಹನುಮನಧ್ವಜ ಹಾರಿಸಲು. ಅವರ ಭಾವನೆಗೆ ವಿರುದ್ಧವಾಗಿ ರಾಜ್ಯ ಸರ್ಕಾರ ನಡೆದುಕೊಂಡಿದೆ. ಜ.26ರಂದು ಅಲ್ಲಿ ರಾಷ್ಟ್ರಧ್ವಜ ಹಾರಿಸಿ ಗೌರವ ಕೊಟ್ಟಿದ್ದಾರೆ. ಆದರೆ, ಯಾವುದೋ ಸಮಯದಲ್ಲಿ ಮನಸ್ಸಿಗೆ ಇಚ್ಛೆ ಬಂದಂತೆ ರಾಷ್ಟ್ರಧ್ವಜ ಹಾರಿಸಿದ ಸರ್ಕಾರ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದೆ. 108 ಅಡಿ ಧ್ವಜಸ್ತಂಭ ಇದ್ದಾಗ ಯಾವ ಅಳತೆಯ ಧ್ವಜ ಇರಬೇಕು? ಯಾವುದನ್ನೂ ಲೆಕ್ಕಿಸದೆ ರಾಷ್ಟ್ರಧ್ವಜಕ್ಕೆ ಅನ್ಯಾಯ, ಅವಮಾನ ಮಾಡಿದ್ದು, ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷ. ಅವರು ಮೊದಲು ದೇಶದ ಮತ್ತು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್‍ನವರು ದ್ವಂದ್ವದಲ್ಲಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಿಗೂ ಕೂಡ ಯಾವ ರೀತಿ ತೀರ್ಮಾನ ತೆಗೆದುಕೊಳ್ಳಬೇಕೋ ಆ ರೀತಿ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿರುವ ಎಲ್ಲಾ ರಾಮಭಕ್ತರು ಈ ದುಷ್ಟ ಕಾಂಗ್ರೆಸ್ ಸರ್ಕಾರದ ನಡವಳಿಕೆಯನ್ನು ಗಮನಿಸುತ್ತಿದ್ದಾರೆ. ನಮ್ಮ ರಾಜ್ಯ, ನಮ್ಮ ದೇಶದಲ್ಲಿ ಹನುಮಧ್ವಜ ಹಾರಿಸಲು ಕಾಂಗ್ರೆಸ್ಸಿನವರು ವಿರೋಧ ವ್ಯಕ್ತಪಡಿಸುವುದಾದರೆ, ಇದು ನಾಚಿಕೆಗೇಡಿನ ಸಂಗತಿ. ಇದನ್ನು ನೋಡಿ ಯಾರೇ ರಾಮಭಕ್ತರು ಕಣ್ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಆಯ್ಕೆ

TAGGED:2024 Lok Sabha ElectionsB.Y vijayendrabjpChikkamagalurucongressಕಾಂಗ್ರೆಸ್ಚಿಕ್ಕಮಗಳೂರುಬಿಜೆಪಿರಾಜಕೀಯಲೋಕಸಭಾ ಚುನಾವಣೆವಿಜಯೇಂದ್ರ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 minute ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
19 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
36 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
43 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?