Connect with us

2018ರ ಚುನಾವಣೆಗೆ ಕಾಂಗ್ರೆಸ್‍ನಲ್ಲಿ ಮಾಸ್ಟರ್ ಪ್ಲಾನ್- ಪ್ರಶಾಂತ್ ಕಿಶೋರ್ ಜೊತೆ ಬರ್ತಾರಂತೆ ರಾಹುಲ್

2018ರ ಚುನಾವಣೆಗೆ ಕಾಂಗ್ರೆಸ್‍ನಲ್ಲಿ ಮಾಸ್ಟರ್ ಪ್ಲಾನ್- ಪ್ರಶಾಂತ್ ಕಿಶೋರ್ ಜೊತೆ ಬರ್ತಾರಂತೆ ರಾಹುಲ್

ಬೆಂಗಳೂರು: ಉತ್ತರಪ್ರದೇಶ ಚುನಾವಣೆ ಬಳಿಕ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಚಿತ್ತ ರಾಜ್ಯದ ಕಡೆ ನೆಟ್ಟಿದೆ. 2018ರ ಚುನಾವಣೆಗೆ ಕಾಂಗ್ರೆಸ್ ಪಾಳಯದಲ್ಲಿ ಈಗಾಗ್ಲೆ ಮಾಸ್ಟರ್ ಪ್ಲಾನ್ ರೆಡಿಯಾಗಿದ್ದು, ರಾಜಕೀಯ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ರಾಜ್ಯದ ‘ಕೈ’ ಹಿಡಿಯಲಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರಶಾಂತ್ ಕಿಶೋರ್ ಜೊತೆ ರಾಹುಲ್ ಗಾಂಧಿ ಮಾತುಕತೆ ನಡೆಸಿದ್ದು ರಾಜ್ಯಕ್ಕೆ ಬರಲು ಒಪ್ಪಿಕೊಂಡಿದ್ದಾರೆ. ಉತ್ತರಪ್ರದೇಶ ಚುನಾವಣೆ ಬಳಿಕ ರಾಜ್ಯಕ್ಕೆ ಬರಲಿದ್ದಾರೆ ಅಂತ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸಿಎಂಗೆ ತಿಳಿಸಿದ್ದಾರೆ. ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ಸಲಹೆ ಪಡೆಯಲು ಸಿಎಂ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಪ್ರಶಾಂತ್ ಕಿಶೋರ್ ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಮೋದಿ ಕ್ಯಾಂಪ್‍ನಲ್ಲಿದ್ರೆ, ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡು ಯಶಸ್ಸಿನ ರೂವಾರಿಯಾಗಿದ್ರು. ಇದೀಗ ಉತ್ತರ ಪ್ರದೇಶದಲ್ಲಿ ಅಖಿಲೇಶ್ ಹಾಗೂ ರಾಹುಲ್ ಕ್ಯಾಂಪ್‍ನಲ್ಲಿ ಕಾರ್ಯನಿರ್ವಹಿಸ್ತಿದ್ದು, ಅಲ್ಲಿ ಯಶಸ್ವಿಯಾದ್ರೆ ರಾಜ್ಯದಲ್ಲಿ ಕೈಗೆ ಚೈತನ್ಯ ನೀಡಲಿದ್ದಾರೆ.

Advertisement
Advertisement