ಅಸ್ಸಾಂ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಪಾಕಿಸ್ತಾನದ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ವಾಗ್ದಾಳಿ ನಡೆಸಿದ್ದಾರೆ.
ಜೋರ್ಹತ್ ಕ್ಷೇತ್ರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪ್ರಣಾಳಿಕೆ (Congress Manifesto) ಬಗ್ಗೆ ಪ್ರತಿಕ್ರಿಯಿಸಿದರು. ಭಾರತಕ್ಕಿಂತ ಪಾಕಿಸ್ತಾನದಲ್ಲಿ (Pakistan) ನಡೆಯುವ ಚುನಾವಣೆಗಳಿಗೆ ಹೆಚ್ಚು ಸೂಕ್ತವೆಂದು ಆರೋಪಿಸಿದ್ದಾರೆ. ಪ್ರಣಾಳಿಕೆಯು ಅಧಿಕಾರಕ್ಕೆ ಬರಲು ಸಮಾಜವನ್ನು ಒಡೆಯುವ ಗುರಿಯನ್ನು ಹೊಂದಿದೆ ಎಂದು ಅವರು ಕಿಡಿಕಾರಿದರು.
Advertisement
ಇದು ತುಷ್ಟೀಕರಣದ ರಾಜಕೀಯ ಮತ್ತು ನಾವು ಇದನ್ನು ಖಂಡಿಸುತ್ತೇವೆ. ಪ್ರಣಾಳಿಕೆಯು ಭಾರತದಲ್ಲಿ ಚುನಾವಣೆಗಾಗಿ ಅಲ್ಲ ಪಾಕಿಸ್ತಾನಕ್ಕೆ ಎಂದು ಭಾಸವಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಇವಿಎಂನಲ್ಲೇ ಚುನಾವಣೆ, ಸ್ಲಿಪ್ ಮತದಾರನ ಕೈಗೆ ಸಿಗಬೇಕು : ಕಾಂಗ್ರೆಸ್ ಪ್ರಣಾಳಿಕೆ
Advertisement
Advertisement
ಹಿಂದೂ ಅಥವಾ ಮುಸ್ಲಿಂ ಯಾವುದೇ ವ್ಯಕ್ತಿ ತ್ರಿವಳಿ ತಲಾಖ್, ಬಹುಪತ್ನಿತ್ವ ಹಾಗೂ ಬಾಲ್ಯ ವಿವಾಹವನ್ನು ಬೆಂಬಲಿಸುವುದಿಲ್ಲ. ಸಮಾಜವನ್ನು ಒಡೆದು ಅಧಿಕಾರಕ್ಕೆ ಬರುವುದು ಕಾಂಗ್ರೆಸ್‌ನ ಮನಸ್ಥಿತಿಯಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ದೇಶಾದ್ಯಂತ ಜಾತಿಗಣತಿ, ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ – ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ
Advertisement
ಇದೇ ವೇಳೆ ಬಿಜೆಪಿಯು ರಾಜ್ಯದ ಎಲ್ಲಾ 14 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಶರ್ಮಾ, ಬಿಜೆಪಿಯು ದೇಶವನ್ನು ‘ವಿಶ್ವ ಗುರು ‘ (ವಿಶ್ವ ನಾಯಕ) ಮಾಡುವ ‘ಆಂದೋಲನ ‘ (ಆಂದೋಲನ) ರೂಪವನ್ನು ತೆಗೆದುಕೊಂಡಿದೆ ಎಂದು ಹೇಳಿದರು .
ಅಸ್ಸಾಂನಲ್ಲಿ ಏಪ್ರಿಲ್ 19, ಏಪ್ರಿಲ್ 26 ಮತ್ತು ಮೇ 7 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.