-ಕೇಂದ್ರದಲ್ಲಿ ಕರ್ನಾಟಕ ಫಾರ್ಮುಲಾ..?
ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆ ಕೊನೆಯ ಹಂತದಲ್ಲಿದ್ದು, ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ತಂತ್ರಗಳನ್ನು ರಚಿಸುತ್ತಿದೆ. ಇದೀಗ ಯಾವ ಪಕ್ಷಕ್ಕೂ ಬಹುಮತ ಸಿಗದೇ ಇದ್ದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಕರ್ನಾಟಕದ ಫಾರ್ಮೂಲಾ ಜಾರಿಗೆ ತರಲು ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
2018ರಲ್ಲ ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಟ್ರೆಂಡ್ ಗೊತ್ತಾಗುತ್ತಿದ್ದಂತೆ ಜೆಡಿಎಸ್ ಬಾಗಿಲನ್ನು ಕಾಂಗ್ರೆಸ್ ತಟ್ಟಿತ್ತು. ಕಾಂಗ್ರೆಸ್ 80 ಕ್ಷೇತ್ರಗಳನ್ನು ಗೆದ್ದಿದ್ದರೂ ಮುಖ್ಯಮಂತ್ರಿ ಸ್ಥಾನವನ್ನು ಜೆಡಿಎಸ್ ಬಿಟ್ಟುಕೊಟ್ಟು ಮೈತ್ರಿ ಮೂಲಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿದೆ. ಇದೇ ಫಾರ್ಮೂಲಾವನ್ನು ಕೇಂದ್ರದಲ್ಲಿ ತರಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಮೆಗಾ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಲು ಸೋನಿಯಾ ಗಾಂಧಿ ಮುಂದಾಗಿದ್ದು, ಈಗಾಗಲೇ ಜಗನ್, ಕೆಸಿಆರ್, ನವೀನ್ ಪಟ್ನಾಯಕ್ ರಿಗೆ ಪತ್ರ ಬರೆದಿದ್ದಾರೆ. ಫಲಿತಾಂಶ ಬರೋ ಸಮಯದಲ್ಲಿ ಎಲ್ಲರನ್ನು ಒಗ್ಗೂಡಿಸಿ ಮೋದಿ ವಿರುದ್ಧ ರಣತಂತ್ರಕ್ಕೆ ಕಾಂಗ್ರೆಸ್ ಮುಂದಾಗಿದೆ. ಒಂದು ವೇಳೆ ಬಿಜೆಪಿಯೇತರ ಪಕ್ಷಗಳು ರಾಹುಲ್ ಗಾಂಧಿ ಪ್ರಧಾನಿ ಆಗೋದನ್ನು ವಿರೋಧಿಸಿದ್ರೆ ಬಿಎಸ್‍ಪಿ ನಾಯಕಿ ಉಮಾವತಿ ಅಥವಾ ಪಶ್ವಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಪಿಎಂ ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.