ಚಿಕ್ಕಬಳ್ಳಾಪುರ: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಯಿಂದ ಕೊರೊನಾ ಸ್ಫೋಟಗೊಂಡಿದ್ದು, ಬೇರೆ ಬೇರೆ ಜಿಲ್ಲೆಯಿಂದ ಪೊಲೀಸ್ ಭದ್ರತೆಗಾಗಿ ತೆರಳಿದ್ದ ಪೊಲೀಸರಲ್ಲಿ ಕೊರೊನಾ ಕಾಣಿಸಿಕೊಳ್ಳುತ್ತದೆ. ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಕರ್ತವ್ಯಕ್ಕೆಂದು ತೆಳಿದ್ದ 10 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಿಂದ ಅಧಿಕಾರಿ, ಸಿಬ್ಬಂದಿ ಸೇರಿ 125 ಮಂದಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. 125 ಮಂದಿಯೂ ವಾಪಸ್ ಬಂದ ನಂತರ ಕೋವಿಡ್ ಟೆಸ್ಟ್‍ಗೆ ಒಳಗಾಗಿದ್ದು, 125 ಮಂದಿಯಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ. ಈ 10 ಮಂದಿಯೂ ಹೋಂ ಐಸೋಲೇಷನ್‍ಗೆ ಒಳಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಎಲ್ಲರಿಗೂ ಸೌಮ್ಯ ಸ್ವಭಾವದ ಗುಣ ಲಕ್ಷಣಗಳಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಾಂಗ್ರೆಸ್ ಪಾದಯಾತ್ರೆ ಎಫೆಕ್ಟ್ – 25 ಪೊಲೀಸರಿಗೆ ಕೊರೊನಾ
Advertisement
Advertisement
ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ 3 ಅಲೆಯಿಂದಾಗಿ 33 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಲ್ಲಿ 6 ಮಂದಿ ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದು, 27 ಮಂದಿ ಕೊರೊನಾ ಸೋಂಕಿತ ಸಕ್ರಿಯ ಪ್ರಕರಣಗಳಿವೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್‍ನಲ್ಲಿ ಬೆಂಕಿ