DistrictsKarnatakaKolarLatestLeading NewsMain Post

ಕಾಂಗ್ರೆಸ್ ಪಾದಯಾತ್ರೆ ಎಫೆಕ್ಟ್ – 25 ಪೊಲೀಸರಿಗೆ ಕೊರೊನಾ

ಕೋಲಾರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದಾಗಿ ಕೊರೊನಾ ಸ್ಫೋಟಗೊಂಡಿದ್ದು, ಈಗಾಗಲೇ ಭದ್ರತೆಗಾಗಿ ತೆರಳಿದ್ದ 25 ಮಂದಿ ಪೊಲೀಸರಿಗೆ ಸೋಂಕು ದೃಢಪಟ್ಟಿದೆ.

ಶುಕ್ರವಾರ ನಗರದ ಟ್ರಾಫಿಕ್ ಪೊಲೀಸ್ ಠಾಣೆಯ ಮೂವರು ಪೊಲೀಸ್ ಪೇದೆಗಳಿಗೆ ಕೊರೊನಾ ಕಾಣಿಸಿಕೊಂಡಿತ್ತು. ಇಂದು ಮತ್ತೆ ಕೆಜಿಎಫ್ ತಾಲೂಕಿನ 25 ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಮೇಕೆದಾಟು ಪಾದಯಾತ್ರೆ ಬಂದೊಬಸ್ತ್‍ಗೆ ತೆರಳಿದ್ದ ಪೊಲೀಸರಿಗೆ ಹಾಗೂ ಅವರ ಕುಟುಂಬದವರಿಗೆ ಆತಂಕ ಉಂಟುಮಾಡಿದೆ. ಇದನ್ನೂ ಓದಿ: 8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ

ಈಗಾಗಲೇ ಜಿಲ್ಲೆಯಲ್ಲಿ ಪಾದಯಾತ್ರೆಯಲ್ಲಿ ಭದ್ರತೆಗಾಗಿ ತೆರಳಿದ್ದ 50 ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇನ್ನೂ ಹಲವು ಪೊಲೀಸರು ಬಂದೋಬಸ್ತ್‍ಗೆ ರಾಮನಗರಕ್ಕೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಪೆÇಲೀಸರಿಗೆ ಸೊಂಕು ತಗುಲಿರುವ ಸಾಧ್ಯತೆಯಿದ್ದು, ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: 3 ಲಕ್ಷ ರೂ. ಗೆ ಹೆತ್ತ ಮಗುವನ್ನೇ ಮಾರಿದ ದಂಪತಿ ಅರೆಸ್ಟ್

Leave a Reply

Your email address will not be published. Required fields are marked *

Back to top button