ಬೇಲೂರು ಪುರಸಭೆ ಮುಖ್ಯಾಧಿಕಾರಿ ಕಾಲರ್ ಹಿಡಿದು ಹೊರಗೆ ದಬ್ಬಿದ `ಕೈ’ ಸದಸ್ಯರು

Public TV
1 Min Read
Congress members create ruckus at meeting

ಹಾಸನ: ಬೇಲೂರು ಪುರಸಭೆ (Belur Municipality) ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಭೆಯಲ್ಲಿ ಕಾಂಗ್ರೆಸ್‍ನ (Congress) ಸದಸ್ಯರು ಪುರಸಭೆ ಮುಖ್ಯಾಧಿಕಾರಿಯ ಕಾಲರ್ ಹಿಡಿದು ಹೊರಗೆ ದಬ್ಬಿದ್ದಾರೆ.

ಕಾಂಗ್ರೆಸ್ ಸದಸ್ಯರು ಪುರಸಭೆ ಅಧ್ಯಕ್ಷ ಅಶೋಕ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರು. ಸಭೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಹಾಗೂ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ ಸಹ ಭಾಗಿಯಾಗಿದ್ದರು. ಈ ಸಭೆಯಲ್ಲಿ, ಪುರಸಭೆ ಮುಖ್ಯಾಧಿಕಾರಿಗೆ ಚುನಾವಣೆ ನಡೆಸುವ ಅಧಿಕಾರವಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಗಲಾಟೆ ಎಬ್ಬಿಸಿದ್ದಾರೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮೂವರಿಗೆ ಚಾಕು ಇರಿತ

ಗಲಾಟೆ ವೇಳೆ, ಪುರಸಭೆ ಮುಖ್ಯಾಧಿಕಾರಿ ಸುಜಯ್ ಅವರ ಕಾಲರ್ ಹಿಡಿದು ಎಳೆದಾಡಿದ್ದಾರೆ. ಬಳಿಕ ಸಭಾಂಗಣದಿಂದ ಹೊರಗೆ ದಬ್ಬಿ ಆಕ್ರೋಶ ಹೊರಹಾಕಿದ್ದಾರೆ.

ಬೇಲೂರು ಪುರಸಭೆಯಲ್ಲಿ 23 ಮಂದಿ ಸದಸ್ಯರಿದ್ದಾರೆ. 17 ಮಂದಿ ಕಾಂಗ್ರೆಸ್ ಸದಸ್ಯರು, ಜೆಡಿಎಸ್‍ನ 5, ಬಿಜೆಪಿಯ ಓರ್ವ ಸದಸ್ಯರಿದ್ದಾರೆ. ಸಭೆಗೆ ಐವರು ಕಾಂಗ್ರೆಸ್ ಸದಸ್ಯರು ಗೈರಾಗಿದ್ದರು. ಗಲಾಟೆಯಿಂದಾಗಿ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸಪಟ್ಟರು. ಬಳಿಕ ಸಭೆಯನ್ನು ಬಹಿಷ್ಕರಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಫಾಜಿಲ್ ಫೋಟೊ ಜೊತೆಗೆ ಸುಹಾಸ್ ಫೋಟೊ ಹಾಕಿ ಟಾರ್ಗೆಟ್ ಫಿಕ್ಸ್ ಮಾಡಿದ್ದ ಹಂತಕರು!

Share This Article