– ನಾನೂ ಶ್ರೀರಾಮನ ಭಕ್ತ ಎಂದ ಮಂಕಾಳ ವೈದ್ಯ
– ಶ್ರೀರಾಮ ಮಂದಿರ ಕಟ್ಟಿದೋರು ನಾವು
– ಆಮಂತ್ರಣ ನೀಡದಿದ್ರೆ ಶ್ರೀರಾಮ ನೋಡಿಕೊಳ್ತಾನೆ ಎಂದ ಸಚಿವ
ಕಾರವಾರ: ಅಯೋಧ್ಯೆಯ ಶ್ರೀರಾಮ ಮಂದಿರ (Ram Mandir) ಉದ್ಘಾಟನೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಲು ಮುಂದಾಗಿರುವುದು ಸರಿಯಲ್ಲ. ಬಿಜೆಪಿಯವರಿಗೆ ನಿಜವಾದ ರಾಮಭಕ್ತಿಯಿದ್ದರೆ ಪಕ್ಷಾತೀತವಾಗಿ ಆಹ್ವಾನ ನೀಡಿ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ (Mankala Vaidya) ಒತ್ತಾಯಿಸಿದ್ದಾರೆ.
Advertisement
ಕಾರವಾರದಲ್ಲಿ (Karwar) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನೂ ಶ್ರೀರಾಮನ ಭಕ್ತ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದೇನೆ. ಆಹ್ವಾನ ಬಂದರೂ ಬಾರದಿದ್ದರೂ ಅಯೋಧ್ಯೆಗೆ (Ayodhya) ತೆರಳುತ್ತೇನೆ. ಜ.22ಕ್ಕೆ ಹೋಗಲು ಪ್ರಯತ್ನಿಸುತ್ತಿದ್ದೇನೆ. ಆಗ ಆಗದಿದ್ದರೆ ನಂತರವಾದರೂ ತೆರಳಿ ಶ್ರೀರಾಮನ ದರ್ಶನ ಪಡೆಯುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಅಕ್ಕಿ, ತರಕಾರಿ, ಸಾಂಬಾರ್ ಪದಾರ್ಥಗಳ ಅರ್ಪಣೆ – ಪ್ರಾಣಪ್ರತಿಷ್ಠೆಗೆ ಶ್ರೀರಾಮ ಭಕ್ತರ ಕಾಣಿಕೆ
Advertisement
Advertisement
ರಾಮನ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುವವರನ್ನು ರಾಮನೇ ನೋಡಿಕೊಳ್ಳುತ್ತಾನೆ. ನಮಗೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಲ್ಲೂ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು. ದೇವರ ಹೆಸರಿನಲ್ಲಿ ರಾಜಕೀಯ ಮಾಡುವುದು ಬಿಜೆಪಿಗರ ಸಂಸ್ಕೃತಿ. ದುಡ್ಡು ನಮ್ಮದು ರಾಮಮಂದಿರ ಕಟ್ಟಿದೋರು ನಾವು, ಸರ್ಕಾರದ ದುಡ್ಡು, ಜನರ ದುಡ್ಡು ಇದು. ಆಮಂತ್ರಣ ಪತ್ರ ನೀಡದಿದ್ರೆ ಬಿಜೆಪಿಯವರು ಉದ್ದೇಶಪೂರ್ವಕವಾಗಿ ನಡೆಸ್ತಿದ್ದಾರೆ ಎಂದರ್ಥ, ರಾಮ ನೋಡಿಕೊಳ್ತಾನೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಹೋಗಲು ಹಿಂದೇಟು ಹಾಕ್ತಿದ್ದವರು ಈಗ ಆಹ್ವಾನ ಬಯಸ್ತಿದ್ದಾರೆ: ಯೋಗಿ ಆದಿತ್ಯನಾಥ್