ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ (Congress) ಕರ್ನಾಟಕದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದೆ.
ಕಾಂಗ್ರೆಸ್‌ನ ಎರಡನೇ ಪಟ್ಟಿಯಲ್ಲಿ 6 ಸಚಿವರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ. ಎರಡೂ ಪಟ್ಟಿಯನ್ನು ಗಮನಿಸಿದರೆ ಒಟ್ಟು 8 ಸಚಿವರ ಸಂಬಂಧಿಕರು ಅಭ್ಯರ್ಥಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿ: ಸುರಪುರ ಉಪ ಚುನಾವಣೆ; ದಿವಂಗತ ರಾಜಾ ವೆಂಕಟಪ್ಪ ನಾಯಕ ಪುತ್ರನಿಗೆ ಕಾಂಗ್ರೆಸ್ ಟಿಕೆಟ್
Advertisement
Advertisement
ಸಚಿವರ ಕುಟುಂಬದವರಿಗೆ ಯಾರ‍್ಯಾರಿಗೆ ಟಿಕೆಟ್? (2 ಪಟ್ಟಿ ಸೇರಿ)
* ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್- ಬೆಂಗಳೂರು ಗ್ರಾಮೀಣ
* ಸಚಿವ ಮಧು ಬಂಗಾರಪ್ಪ ಸಹೋದರಿ ಗೀತಾ ಶಿವರಾಜ್ ಕುಮಾರ್- ಶಿವಮೊಗ್ಗ
* ಸಚಿವ ರಾಮಲಿಂಗ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ- ಬೆಂಗಳೂರು ದಕ್ಷಿಣ
* ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ- ಬೀದರ್
* ಸಚಿವ ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ- ದಾವಣಗೆರೆ
* ಸಚಿವ ಶಿವಾನಂದ ಪಟೀಲ್ ಪುತ್ರಿ ಸಂಯುಕ್ತ ಪಾಟೀಲ್- ಬಾಗಲಕೋಟೆ
* ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್- ಬೆಳಗಾವಿ
* ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ- ಚಿಕ್ಕೋಡಿ
Advertisement
Advertisement
ಮೂರು ಕಡೆ ಪಕ್ಷದ ನಾಯಕರ ಸಂಬಂಧಿಕರಿಗೆ ಟಿಕೆಟ್
* ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ- ಕಲಬುರ್ಗಿ
* ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್- ಬೆಂಗಳೂರು ಕೇಂದ್ರ
* ಶಾಸಕ ರಾಘವೇಂದ್ರ ಹಿಟ್ನಾಳ್ ಸಹೋದರ ರಾಜಶೇಖರ ಹಿಟ್ನಾಳ್- ಕೊಪ್ಪಳ