ಬೆಂಗಳೂರು: ಅತೃಪ್ತ ಶಾಸಕರನ್ನು ಮನವೊಲಿಸಲು ಉಪಹಾರ ಕೂಟಕ್ಕೆ ಬಂದ ಎಲ್ಲ ಕಾಂಗ್ರೆಸ್ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಚಿವರು ತಮ್ಮ ರಾಜೀನಾಮೆ ಪತ್ರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊಟ್ಟಿದ್ದರು. ಇಂದು ಬೆಳಗ್ಗೆಯೇ ಸಿದ್ದರಾಮಯ್ಯ ಉಪಹಾರ ಕೂಟಕ್ಕೆ ಬರುವಾಗಲೇ ನೀವು ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ಸಚಿವರಿಗೆ ಸಂದೇಶ ರವಾನಿಸಿದ್ದರು. ಅದರಂತೆಯೇ ಉಪಹಾರ ಕೂಟಕ್ಕೆ ಬಂದ ಕೈ ಶಾಸಕರು ಬೇಸರದಿಂದಲೇ ರಾಜೀನಾಮೆ ನೀಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಸಚಿವರ ರಾಜೀನಾಮೆಯನ್ನು ಪಡೆದುಕೊಂಡಿದ್ದಾರೆ. ಇನ್ನು ಜೆಡಿಎಸ್ ಸಚಿವರು 12 ಗಂಟೆಗೆ ತನ್ನ ರಾಜೀನಾಮೆ ಸಲ್ಲಿಸಲಿದ್ದಾರೆ. ಸಿಎಂ ಸದ್ಯಕ್ಕೆ ತಾಜ್‍ವೆಸ್ಟೆಂಡ್ ಹೋಟೆಲ್‍ಗೆ ಹೋಗಿದ್ದಾರೆ.
10 ಜೆಡಿಎಸ್ ಸಚಿವರ ರಾಜೀನಾಮೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಅವರೆಲ್ಲರನ್ನೂ ತಾಜ್ ವೆಸ್ಟೆಂಡ್ ಹೋಟೆಲ್‍ಗೆ ಬರುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಜೆಡಿಎಸ್ ಸಚಿವರು ಹೋಟೆಲ್‍ಗೆ ಬರುತ್ತಾರೆ.
ಕಳೆದ ದಿನವೇ ಕಾಂಗ್ರೆಸ್ ಮತ್ತು ಜೆಡಿಎಸ್ ಸಚಿವರ ಬಳಿ ರಾಜೀನಾಮೆ ಪಡೆದುಕೊಳ್ಳುವ ಬಗ್ಗೆ ಚೆರ್ಚೆ ಮಾಡಲಾಗಿತ್ತು. ಆದ್ದರಿಂದ ಸಚಿವರಿಂದ ರಾಜೀನಾಮೆ ಪಡೆದುಕೊಳ್ಳುತ್ತಿದ್ದಾರೆ. ಎಲ್ಲ ಸಚಿವ ಸ್ಥಾನವನ್ನು ಖಾಲಿ ಇಟ್ಟುಕೊಂಡು ಬಳಿಕ ರಾಜೀನಾಮೆ ಕೊಟ್ಟಿರುವ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಕೊಡುವಂತೆ ಮನವೊಲಿಸುವ ಪ್ರಯತ್ನವನ್ನು ಕೈ-ದಳದ ನಾಯಕರು ಮಾಡುತ್ತಿದ್ದಾರೆ. ಇತ್ತ ಮುಳುಬಾಗಿನಿಂದ ಪಕ್ಷೇತರ ಶಾಸಕನಾಗಿ ಆಯ್ಕೆಯಾಗಿ ಬಳಿಕ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ನಾಗೇಶ್ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತರ ಜೊತೆ ಸೇರಿಕೊಳ್ಳಲು ಮುಂಬೈಗೆ ತೆರಳಿದ್ದಾರತೆ ಎಂಬ ಮಾಹಿತಿ ಲಭ್ಯವಾಗಿದೆ.