ಬಳ್ಳಾರಿ: ಹೊಸಬರಿಗೆ ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ, ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನುವ ಮೂಲಕ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ಸಿನ ಹಾಲಿ ಶಾಸಕ ಬಿ.ಆನಂದ್ ಸಿಂಗ್ ಚುನಾವಣೆಗೆ ನಿವೃತ್ತಿ ಘೋಷಿಸಿದ್ದಾರೆ.
ಬುಧವಾರ ಹೊಸಪೇಟೆಯಲ್ಲಿ ನಡೆದ ವಾಲ್ಮೀಕಿ ಸಮಾಜದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಮುಂದಿನ ದಿನಗಳಲ್ಲಿ ಸಕ್ರೀಯ ರಾಜಕಾರಣದಲ್ಲಿ ಮಾತ್ರ ಇರುತ್ತೇನೆ. ಯಾವುದೇ ಕಾರಣಕ್ಕೂ ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಬೇರೆಯವರಿಗೆ ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ನನಗೆ ಹತ್ತು ಬಾರಿ ಶಾಸಕನಾಗಬೇಕು ಎನ್ನುವ ಕನಸಿಲ್ಲ. ಈಗಾಗಲೇ ಮೂರು ಬಾರಿ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ. ಮುಂದಿನ ಚುನಾವಣೆಗಳಲ್ಲಿ ಬೇರೆಯವರಿಗೆ ಅವಕಾಶ ಕಲ್ಪಿಸಿಕೊಡುವ ದೃಷ್ಟಿಯಿಂದ ಚುನಾವಣಾ ನಿವೃತ್ತಿ ಮಾಡುತ್ತಿದ್ದೇನೆ. ಆದರೆ ಎಂದಿಗೂ ಸಕ್ರೀಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv