ಶಿವಮೊಗ್ಗ: ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸತ್ಯಾಗ್ರಹ ನಡೆಸಿದರು.
ನಗರದ ಗಾಂಧಿಪಾರ್ಕ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರು ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಘೋಷಣೆ ಕೂಗಿದರು. ಕೇಂದ್ರ ಸರಕಾರ ಪ್ರಜಾಪ್ರಭುತ್ವ ವಿರೋಧಿ ಮಸೂದೆ ಮಂಡಿಸಿದೆ. ಬಿಜೆಪಿ ದೇಶಕ್ಕೆ ಮಾರಕವಾಗಿದ್ದು, ಸಂವಿಧಾನ ವಿರೋಧಿಯಾಗಿದ್ದು, ದೇಶ ಒಡೆಯಲು ಈ ಕಾಯ್ದೆ ಜಾರಿಗೊಳಿಸಿದೆ ಎಂದು ಆರೋಪಿಸಿದರು.
Advertisement
Advertisement
ಇದೇ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸೇರಿದಂತೆ ಇತರೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಪೌರತ್ವ ತಿದ್ದುಪಡಿ ಮಸೂದೆಯನ್ನು ಡಿಸೆಂಬರ್ 9 ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, 311 ಮತಗಳಿಂದ ಪಾಸ್ ಸಹ ಆಗಿತ್ತು. ಆದರೆ ಅಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದವು. ಈ ವೇಳೆ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದರು. ಇದಾದ ಬಳಿಕ ಮಸೂದೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಕಿತ ಹಾಕಿದ್ದು, ಶುಕ್ರವಾರ ಮಧ್ಯರಾತ್ರಿಯಿಂದಲೇ ಕಾಯ್ದೆ ಜಾರಿಗೆ ಬಂದಿತ್ತು. ಆ ಬಳಿಕ ದೇಶಾದ್ಯಂತ ಪರ ವಿರೋಧ ಚರ್ಚೆಗಳಾಗುತ್ತಿದ್ದು, ಹಲವೆಡೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ.