ಬೆಂಗಳೂರು: ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಸಿಎಂ ಆಗ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ (Balakrishna) ಹೇಳಿದರು.
ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಇದನ್ನೂ ಓದಿ: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ – ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಮಳೆ ಅಲರ್ಟ್
ಶಾಸಕರು ಚರ್ಚೆ ಮಾಡುತ್ತಿಲ್ಲ, ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ. ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆಶಿ ಆವರು ಸಿಎಂ ಆಗ್ತಾರೆ, ಸಿದ್ದರಾಮಯ್ಯ ಬಳಿಕ ಅವರೇ ಆಗಬೇಕಲ್ವಾ? ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ? ಆದ್ರೆ ಈ ಅವಧಿಯಲ್ಲೇ ಆಗ್ತಾರ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತ ಪ್ರಶ್ನೆ ಮಾಡಿದರು.
ಒಕ್ಕಲಿಗರ ಸಂಘದಿಂದ ಡಿಕೆಶಿ ಸಿಎಂ ಮಾಡಲು ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೊ ಹೇಳಿದ್ರು ಅಂದ ಮಾತ್ರಕ್ಕೆ ಹೇಳಿದವರನ್ನೆಲ್ಲಾ ಸಿಎಂ ಮಾಡೋದಕ್ಕೆ ಆಗಲ್ಲ. ಅವರು ಜಾತಿ ಅಭಿಮಾನದಿಂದ ಹೇಳಿದ್ದಾರೆ. ಹೈಕಮಾಂಡ್ ನಾಯಕರು ಅಂತಿಮ ನಿರ್ಧಾರ ಮಾಡ್ತಾರೆ ಎಂದರು. ಇದನ್ನೂ ಓದಿ: ಆ್ಯಪಲ್ ಸಹ ಸಂಸ್ಥಾಪಕ ಸ್ವೀವ್ ಜಾಬ್ಸ್ ಪತ್ನಿ ಲಾರೆನ್ ಇನ್ಮುಂದೆ ʻಕಮಲಾʼ – ಹಿಂದೂ ಹೆಸರು ನಾಮಕರಣ